ADVERTISEMENT

ಸಿಐಡಿಗಿಂತ ನ್ಯಾಯಾಂಗ ತನಿಖೆಯೇ ಸೂಕ್ತ: ಬಸವರಾಜ ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 25 ಡಿಸೆಂಬರ್ 2019, 19:46 IST
Last Updated 25 ಡಿಸೆಂಬರ್ 2019, 19:46 IST
   

ಕುಶಾಲನಗರ: ‘ಪೌರತ್ವ (ತಿದ್ದುಪಡಿ) ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಪ್ರತಿಭಟನೆ ಹಾಗೂ ಗೋಲಿಬಾರ್ ಕುರಿತು ಸಿಐಡಿ ತನಿಖೆಗಿಂತ ನ್ಯಾಯಾಂಗ ತನಿಖೆ ನಡೆಸುವುದೇ ಸೂಕ್ತ’ ಎಂದು ವಿಧಾನ ಪರಿಷತ್‌ ಸದಸ್ಯ ಬಸವರಾಜ ಹೊರಟ್ಟಿ ಇಲ್ಲಿ ಹೇಳಿದರು.‌

'ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ಆದೇಶಿಸಿದೆ. ಆದರೆ, ಸಿಐಡಿ ಅಧಿಕಾರಿ
ಗಳು ತಮ್ಮದೇ ಇಲಾಖೆಯ ಪೊಲೀಸರ ಮೇಲೆ ನಿಷ್ಪಕ್ಷಪಾತ ತನಿಖೆ ನಡೆಸುತ್ತಾರೆ ಎಂಬ ನಂಬಿಕೆಯಿಲ್ಲ. ಯಾರೇ ಆದರೂ ಅವರ ಇಲಾಖೆ ಸಿಬ್ಬಂದಿಯನ್ನು ಬಿಟ್ಟು ಕೊಡುವುದಿಲ್ಲ. ಆದ್ದರಿಂದ ಹೈಕೋರ್ಟ್ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ನಡೆಸುವುದು ಸೂಕ್ತ' ಎಂದರು.

‘ಮಂಗಳೂರು ಪ್ರವೇಶಿಸದಂತೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ತಡೆದ ಕ್ರಮ ಸರಿಯಿಲ್ಲ. ಇದು ಪ್ರಜಾಪ್ರಭುತ್ವ ವಿರೋಧಿ ಕ್ರಮವಾಗಿದೆ. ಮುಖ್ಯಮಂತ್ರಿಗೆ ಹೇಗೆ ಸ್ಥಾನಮಾನ ಇದೆಯೋ ಅದೇ ರೀತಿ ವಿರೋಧ ಪಕ್ಷದ ನಾಯಕರಿಗೂ ಇದೆ. ಈ ವಿಚಾರದಲ್ಲಿ ಸರ್ಕಾರ ನಡೆದುಕೊಂಡ ರೀತಿ ಸರಿಯಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.