ADVERTISEMENT

ಮಂಗಳೂರು ಗಲಭೆ ಆರೋಪಿಗಳಿಗೆ ಹೈಕೋರ್ಟ್‌ನಿಂದ ಷರತ್ತುಬದ್ಧ ಜಾಮೀನು

​ಪ್ರಜಾವಾಣಿ ವಾರ್ತೆ
Published 27 ಫೆಬ್ರುವರಿ 2020, 8:16 IST
Last Updated 27 ಫೆಬ್ರುವರಿ 2020, 8:16 IST
   

ಬೆಂಗಳೂರು: ಮಂಗಳೂರು ಉತ್ತರ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ನಡೆಸಿದ ಹಾಗೂ ಠಾಣೆಗೆ ಬೆಂಕಿ ಹಚ್ಚಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿದ್ದ 16 ಮಂದಿಗೆ ಹೈಕೋರ್ಟ್ ಗುರುವಾರಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.

ಸುಹೇಲ್ ಹಾಗೂ ತಂಝೀಲ್ ಸೇರಿದಂತೆ 16 ಆರೋಪಿಗಳು ಜಾಮೀನು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.

ಈ ಅರ್ಜಿಗಳನ್ನು ನ್ಯಾಯಮೂರ್ತಿ ಜಾನ್ ಮೈಕೆಲ್ ಕುನ್ಹ ಅವರಿದ್ದ ಏಕಸದಸ್ಯ ನ್ಯಾಯಪೀಠ ಪುರಸ್ಕರಿಸಿದೆ.

ADVERTISEMENT

ಈ ಆರೋಪಿಗಳಿಗೆ ಜಾಮೀನು ನೀಡಲು ಮಂಗಳೂರು 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯ ನಿರಾಕರಿಸಿದ್ದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.