ADVERTISEMENT

ಮಂಗಳೂರು ವಿ.ವಿ ಕುಲಪತಿ: ಮೂವರ ಹೆಸರು ಶಿಫಾರಸು

​ಪ್ರಜಾವಾಣಿ ವಾರ್ತೆ
Published 5 ಡಿಸೆಂಬರ್ 2018, 19:35 IST
Last Updated 5 ಡಿಸೆಂಬರ್ 2018, 19:35 IST

ಬೆಂಗಳೂರು: ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಅಭ್ಯರ್ಥಿ ಆಯ್ಕೆಗೆ ಸಂಬಂಧಿಸಿದಂತೆ ತಜ್ಞರನ್ನು ಒಳಗೊಂಡ ಶೋಧನಾ ಸಮಿತಿ ಮೂವರ ಹೆಸರುಗಳನ್ನು ಅಂತಿಮಗೊಳಿಸಿದೆ.

ಸಮಿತಿ ಬುಧವಾರ ಮುಚ್ಚಿದ ಲಕೋಟೆಯಲ್ಲಿ ಮೂವರ ಹೆಸರುಗಳನ್ನು ಉನ್ನತ ಶಿಕ್ಷಣ ಸಚಿವರಿಗೆ ಸಲ್ಲಿಸಿದೆ. ತುಮಕೂರು ವಿಶ್ವವಿದ್ಯಾಲಯದ ಕುಲಪತಿ ಡಾ. ಸಿದ್ಧೇಗೌಡ ಅಧ್ಯಕ್ಷತೆಯ ಶೋಧನಾ ಸಮಿತಿ 13 ಅರ್ಜಿಗಳಲ್ಲಿ ಮೂವರ ಹೆಸರುಗಳನ್ನು ಅಂತಿಮಗೊಳಿಸಿದೆ. ವಿಶ್ವವಿದ್ಯಾಲಯದಲ್ಲಿ ಬೋಧನಾ ಹುದ್ದೆಯನ್ನು ಸಮರ್ಥವಾಗಿ ನಿಭಾಯಿಸಿರುವ ಮತ್ತು ಕುಲಸಚಿವರಾಗಿ ಸೇವೆ ಸಲ್ಲಿಸಿರುವವರಿಗೆ ಆದ್ಯತೆ ನೀಡಲಾಗಿದೆ. ಶೈಕ್ಷಣಿಕ ಗುಣಮಟ್ಟ ಸುಧಾರಣೆ ಹಾಗೂ ಆಡಳಿತಾತ್ಮಕವಾಗಿ ಉತ್ತಮ ಸಾಧನೆ ಮಾಡಿದವರನ್ನು ಪರಿಗಣಿಸಲಾಗಿದೆ. ಸರ್ಕಾರ ಮೂರು ಹೆಸರುಗಳಲ್ಲಿ ಒಂದನ್ನು ರಾಜ್ಯಪಾಲರಿಗೆ ಕಳುಹಿಸಲಿದೆ. ರಾಜ್ಯಪಾಲರು ಇದನ್ನು ಒಪ್ಪಬಹುದು ಇಲ್ಲವೇ ತಿರಸ್ಕರಿಸಬಹುದು ಎಂದು ಸಿದ್ಧೇಗೌಡ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT