ADVERTISEMENT

ಬಿಜೆಪಿ ಸಂಸದರಿದ್ದೂ ಮಂಗಳೂರಿಗೆ ಎನ್‌ಐಎ ಕಚೇರಿ ತರಲು ಸಾಧ್ಯವಾಗಿಲ್ಲ: ಕಾಂಗ್ರೆಸ್

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 25 ನವೆಂಬರ್ 2022, 7:26 IST
Last Updated 25 ನವೆಂಬರ್ 2022, 7:26 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ಕೇಂದ್ರ ಸರ್ಕಾರದೊಂದಿಗೆ ಚರ್ಚಿಸಿ ಮಂಗಳೂರಿನಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಕಚೇರಿಯನ್ನು ಸ್ಥಾಪಿಸುತ್ತೇವೆ ಎಂದಿದ್ದ ಬಿಜೆಪಿ ಇಷ್ಟು ವರ್ಷಗಳ ಕಾಲ ಮಾಡಿದ್ದೇನು ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಎನ್‌ಐಎ ಕಚೇರಿ ಸ್ಥಾಪನೆ ವಿಚಾರ ಪ್ರಸ್ತಾಪಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ‘ಡಬಲ್ ಇಂಜಿನ್ ಸರ್ಕಾರ ಕೇವಲ ಭಾಷಣಕ್ಕೆ ಮಾತ್ರ ಸೀಮಿತವಾಗಿದ್ದೇಕೆ?, ಬಿಜೆಪಿಯ 25 ಸಂಸದರಿದ್ದೂ ಎನ್‌ಐಎ ಕಚೇರಿ ತರಲು ಸಾಧ್ಯವಾಗಿಲ್ಲವೇಕೆ?’ ಎಂದು ಟೀಕಿಸಿದೆ.

ಮಂಗಳೂರು ನಗರದ ನಾಗುರಿ ಬಳಿ ನ.19ರಂದು ಆಟೊರಿಕ್ಷಾದಲ್ಲಿ ನಡೆದ ಕುಕ್ಕರ್ ಬಾಂಬ್ ಸ್ಫೋಟ ಸಂಭವಿಸಿದ್ದು, ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಸೇರಿದಂತೆ ಸ್ಫೋಟದ ಆರೋಪಿ ಶಾರಿಕ್‌ ಗಂಭೀರವಾಗಿ ಗಾಯಗೊಂಡಿದ್ದಾರೆ.

ADVERTISEMENT

ಗಾಯಾಳುಗಳನ್ನು ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆತ ಚಿಕಿತ್ಸೆಗೆ ಸ್ಪಂದಿಸುತ್ತಿದ್ದು, ಆತನ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡುಬಂದಿದೆ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.