ಮಂಗಳೂರು: ನಗರದ ಗರೋಡಿಯಲ್ಲಿ ಆಟೊರಿಕ್ಷಾದಲ್ಲಿ ಕುಕ್ಕರ್ ಬಾಂಬ್ ಸ್ಫೋಟ ಹಾಗೂ ಕರಾವಳಿಗೆ ಭಯೋತ್ಪಾದನಾ ಚಟುವಟಿಕೆಗಳ ನಂಟಿನ ಕುರಿತು ಗೃಹಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ಅಧಿಕಾರಿಗಳ ಜೊತೆ ನಗರದಲ್ಲಿ ಬುಧವಾರ ಬೆಳಿಗ್ಗೆ 10 ಗಂಟೆಗೆ ಸಭೆ ನಡೆಸಲಿದ್ದಾರೆ.
ಬಾಂಬ್ ಸ್ಫೋಟದಿಂದ ಗಾಯಗೊಂಡಿರುವ ರಿಕ್ಷಾ ಚಾಲಕ ಪುರುಷೋತ್ತಮ ಪೂಜಾರಿ ಹಾಗೂ ಆರೋಪಿ ಶಾರಿಕ್ ಚಿಕಿತ್ಸೆ ಪಡೆಯುತ್ತಿರುವ ಕಂಕನಾಡಿಯ ಫಾದರ್ ಮುಲ್ಲರ್ಸ್ ಆಸ್ಪತ್ರೆಗೆ ಗೃಹಸಚಿವರು ಭೇಟಿ ನೀಡಲಿದ್ದಾರೆ. ಬಳಿಕ ಕೃತ್ಯ ನಡೆದ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಲಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.