ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದೆ. ಮೊಂಟೆಪದವಿನಲ್ಲಿ ಮನೆ ಮೇಲೆ ಗುಡ್ಡವೊಂದು ಕುಸಿದು ಓರ್ವ ಮಹಿಳೆ ಮೃತಪಟ್ಟು , ಇಬ್ಬರು ಗಾಯಗೊಂಡಿದ್ದಾರೆ.
ಒಬ್ಬ ಮಹಿಳೆ ಹಾಗೂ ಇಬ್ಬರು ಮಣ್ಣಿನಡಿಯಲ್ಲಿ ಸಿಲುಕಿಕೊಂಡಿದ್ದು, ರಕ್ಷಣಾ ಕಾರ್ಯ ಭರದಿಂದ ನಡೆಯುತ್ತಿದೆ.
ಮೃತಪಟ್ಟ ಮಹಿಳೆಯನ್ನು ಪ್ರೇಮ(58) ಎಂದು ಗುರುತಿಸಲಾಗಿದೆ. ಅವರ ಪತಿ ಕಾಂತಪ್ಪ ಅವರು ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಉಳ್ಳಾಲ ತಾಲ್ಲೂಕಿನ ಬೆಳ್ಳಗ್ರಾಮದ ಕಾನಕರೆ ಎಂಬಲ್ಲಿ ವಿಪರೀತ ಮಳೆಗೆ ಮನೆ ಮೇಲೆ ಗುಡ್ಡ ಕುಸಿದು ಮಗು ಮೃತಪಟ್ಟಿದೆ.
ಉಳ್ಳಾಲ ಕಲ್ಲಾಪು ಪರಿಸರದಲ್ಲಿ ಮನೆಗಳಿಗೆ ನೀರು ನುಗ್ಗಿದೆ
ಮೊಂಟೆಪದವಿನಲ್ಲಿ ಇಂದು ಮುಂಜಾನೆ ನಾಲ್ಕು ಗಂಟೆಗೆ ಸುಮಾರಿಗೆ ಘಟನೆ ನಡೆದಿದೆ.
ಮಂಗಳೂರು ನಗರದಲ್ಲಿ ಪ್ರವಾಹ ಸ್ಥಿತಿ, ಶಾಲೆಗಳಿಗೆ ರಜೆ ಘೋಷಣೆ
ಮಂಗಳೂರಿನ ಬಿಜೈ ಮುಖ್ಯ ರಸ್ತೆಯಲ್ಲಿ ಬಾಳಿಗಾ ಸ್ಟೋರ್ಸ್ ಬಳಿ ರಸ್ತೆಗೆ ಉರುಳಿದ ಭಾರಿ ಮರ
ಮೊಂಟೆಪದವು: ಎನ್‌ಡಿಆರ್‌ಎಫ್, ಎಸ್‌ಡಿಆರ್‌ಪಿ, ಅಗ್ನಿಶಾಮಕ ದಳ, ಪೊಲೀಸರು ಹಾಗೂ ಸ್ಥಳೀಯರ ನೇತೃತ್ವದಲ್ಲಿ ರಕ್ಷಣಾ ಕಾರ್ಯ
ಉಡುಪಿಯಲ್ಲೂ ಭಾರಿ ಮಳೆ, ಶಾಲೆಗಳಿಗೆ ರಜೆ ಘೋಷಣೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.