ಮಂಗಳೂರು: ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುತ್ತಿರುವ ಕಾರಣ ಸೆ.21 ರಂದು ನಿಗದಿಯಾಗಿದ್ದ ಮಂಗಳೂರು ವಿಶ್ವವಿದ್ಯಾಲಯದ ಸ್ನಾತಕೋತ್ತರ ಮತ್ತು ಪದವಿ ಸೇರಿದಂತೆ ಎಲ್ಲ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಪರಿಷ್ಕೃತ ದಿನಾಂಕವನ್ನು ಶೀಘ್ರವೇ ಪ್ರಕಟಿಸಲಾಗುವುದು ಎಂದು ಪರೀಕ್ಷಾಂಗ ಕುಲಸಚಿವ ಪ್ರೊ.ಧರ್ಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.