ಕಲಬುರ್ಗಿ: ಮಾ 7ರಂದು ಲಿಂಗೈಕ್ಯರಾದ ಸೇಡಂ ತಾಲ್ಲೂಕಿನ ಯಾನಾಗುಂದಿಯ ಮಾತೆ ಮಾಣಿ ಮಾಣಿಕೇಶ್ವರಿ ಅವರ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಗುತ್ತದೆ.
ಮಧ್ಯಾಹ್ನ 1 ಗಂಟೆಗೆ ಸೂರ್ಯನಂದಿ ಬೆಟ್ಟದ ಆಶ್ರಮದ ಗುಹೆಯಲ್ಲಿ ಧಾರ್ಮಿಕ ವಿಧಿವಿಧಾನಗಳ ಬಳಿಕ ಅಂತ್ಯಕ್ರಿಯೆ ನಡೆಯಲಿದೆ.
ಸರ್ಕಾರದ ಪರವಾಗಿ ಸಚಿವ ಪ್ರಭು ಚವ್ಹಾಣ್ ಭಾಗವಹಿಸುವರು.
ಭಾನುವಾರ ಬೆಳಿಗ್ಗೆಯಿಂದಲೇ ಸಾರ್ವಜನಿಕರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಕರ್ನಾಟಕ, ತೆಲಂಗಾಣ, ಆಂಧ್ರಪ್ರದೇಶ ಹಾಗೂ ಮಹಾರಾಷ್ಟ್ರದ ಲಕ್ಷಾಂತರ ಭಕ್ತರು ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.