ADVERTISEMENT

ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್ ರಜಾಕ್ ನಿಧನ

​ಪ್ರಜಾವಾಣಿ ವಾರ್ತೆ
Published 20 ಅಕ್ಟೋಬರ್ 2018, 3:26 IST
Last Updated 20 ಅಕ್ಟೋಬರ್ 2018, 3:26 IST
ಪಿ.ಬಿ. ಅಬ್ದುಲ್ ರಜಾಕ್
ಪಿ.ಬಿ. ಅಬ್ದುಲ್ ರಜಾಕ್   

ಕಾಸರಗೋಡು: ಮಂಜೇಶ್ವರ ಶಾಸಕ ಪಿ.ಬಿ. ಅಬ್ದುಲ್ ರಜಾಕ್ ಅವರು ನಗರದನುಳ್ಳಿಪಾಡಿ ಖಾಸಗಿ ಆಸ್ಪತ್ರೆಯಲ್ಲಿ ಶನಿವಾರ ಬೆಳಿಗ್ಗೆ ನಿಧನರಾಗಿದ್ದಾರೆ.

61 ವರ್ಷದ ಅಬ್ದುಲ್‌ ಅವರು ಮೂರು ದಿನಗಳಿಂದ ಜ್ವರ ಬಳಲುತ್ತಿದ್ದು, ಆಸ್ಪತ್ರೆಗೆ ದಾಖಲಾಗಿದ್ದರು. ಅವರು ಪತ್ನಿ ಹಾಗೂ ನಾಲ್ಕು ಮಕ್ಕಳನ್ನು ಆಗಲಿದ್ದಾರೆ.

ಮಂಜೇಶ್ವರ ಕ್ಷೇತ್ರದಿಂದ ಶಾಸಕರಾಗಿ ಎರಡನೇ ಬಾರಿ ಯುಡಿಎಫ್ ಅಭ್ಯರ್ಥಿಯಾಗಿ ಸ್ಪರ್ಧಿಸಿ ಆಯ್ಕೆಯಾಗಿದ್ದರು.

ADVERTISEMENT

2016ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕೆ.ಸುರೇಂದ್ರನ್ ಅವರನ್ನು ಕೇವಲ 89ಮತಗಳ ಅಂತರದಿಂದ ಸೋಲಿಸಿದ್ದರು.
ಚೆಂಗಳ ಗ್ರಾಮ ಪಂಚಾಯಿತಿ ಅಧ್ಯಕ್ಷ, ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.