
ಪ್ರಜಾವಾಣಿ ವಾರ್ತೆ
ಬೆಂಗಳೂರು: ಈಡಿಗ–ಬಿಲ್ಲವ ಸೇರಿದಂತೆ 26 ಜಾತಿಗಳ ಸಮಗ್ರ ಅಭಿವೃದ್ಧಿಗಾಗಿ ಸ್ಥಾಪಿಸಲಾಗಿರುವ ‘ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ’ದ ಅಧ್ಯಕ್ಷರನ್ನಾಗಿ ಉಡುಪಿ ಜಿಲ್ಲೆಯ ಮಂಜುನಾಥ ಪೂಜಾರಿ ಅವರನ್ನು ನೇಮಿಸಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಆದೇಶ ಹೊರಡಿಸಿದೆ.
ನಿಗಮವನ್ನು ಕಂಪನಿ ಕಾಯ್ದೆಯ ನಿಯಮಗಳಂತೆ ನೋಂದಣಿ ಮಾಡಬೇಕು. ನಿಗಮಕ್ಕೆ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಕ ಮಾಡುವವರೆಗೆ ಕಾಡುಗೊಲ್ಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹೆಚ್ಚುವರಿ ಕಾರ್ಯಭಾರ ನೀಡಬೇಕು ಎಂದು ವಾರದ ಹಿಂದೆ ಇಲಾಖೆ ಆದೇಶ ಹೊರಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.