ಸುಪ್ರೀಂ ಕೋರ್ಟ್
ನವದೆಹಲಿ: ವಕ್ಫ್ ತಿದ್ದುಪಡಿ ಕಾಯ್ದೆ–2025ರ ಸಾಂವಿಧಾನಿಕ ಸಿಂಧುತ್ವ ಪ್ರಶ್ನಿಸಿ ಕರ್ನಾಟಕದ ಕಾಂಗ್ರೆಸ್ ಮುಖಂಡ ಮನ್ಸೂರ್ ಅಲಿ ಖಾನ್ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.
ಖಾನ್ ಪರವಾಗಿ ಅರ್ಜಿ ಸಲ್ಲಿಸಿರುವ ವಕೀಲರಾದ ಶಿವಾಂಗಿ ಆನಂದ್, ‘ವಕ್ಫ್ ತಿದ್ದುಪಡಿ ವಿಧೇಯಕಕ್ಕೆ ಸಂಬಂಧಿಸಿದಂತೆ ರಚಿಸಲಾಗಿದ್ದ ಜಂಟಿ ಸಂಸದೀಯ ಸಮಿತಿಯ ಕೆಲ ಸದಸ್ಯರು ಹಾಗೂ ಇತರ ಪಾಲುದಾರರು ಆಕ್ಷೇಪಿಸಿದ್ದ ವಿಚಾರಗಳನ್ನು ಗಣನೆಗೆ ತೆಗೆದುಕೊಳ್ಳದೆ ಮಸೂದೆಯನ್ನು ಅಂಗೀಕರಿಸಲಾಗಿದೆ. ಈ ಕಾಯ್ದೆ ಸಂವಿಧಾನನಾಹಿರ’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.