ADVERTISEMENT

ಮಂತ್ರಾಲಯ: ರಾಯರ ಮಧ್ಯಾರಾಧನೆ ಇಂದು

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2019, 20:07 IST
Last Updated 16 ಆಗಸ್ಟ್ 2019, 20:07 IST
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಮೂಲ ವೃಂದಾವನಕ್ಕೆ ಪಂಚಾಮೃತ ಮಹಾಭಿಷೇಕ, ಪುಷ್ಪಾಲಂಕಾರ ನೆರವೇರಿಸಿದರು
ಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಮೂಲ ವೃಂದಾವನಕ್ಕೆ ಪಂಚಾಮೃತ ಮಹಾಭಿಷೇಕ, ಪುಷ್ಪಾಲಂಕಾರ ನೆರವೇರಿಸಿದರು   

ರಾಯಚೂರು: ಶ್ರೀ ರಾಘವೇಂದ್ರ ಸ್ವಾಮಿಗಳ 348ನೇ ಆರಾಧನಾ ಮಹೋತ್ಸವವು ವಿಜೃಂಭಣೆಯಿಂದ ಸಾಗಿದ್ದು, ಶುಕ್ರವಾರ ನಡೆದ ಪೂರ್ವಾರಾಧನೆಯಲ್ಲಿ ನಾಡಿನ ವಿವಿಧೆಡೆಯಿಂದ ಭಕ್ತರು ಪಾಲ್ಗೊಂಡಿದ್ದರು.

ಮಠದ ಮೂಲರಾಮ ದೇವರ ಪ್ರತಿಮೆಗಳಿಗೆ ವಿಶೇಷ ಪೂಜೆ, ರಾಯರ ಮೂಲ ವೃಂದಾವನಕ್ಕೆ ಪಂಚಾಮೃತ ಮಹಾಭಿಷೇಕ ನೆರವೇರಿಸಲಾಯಿತು.

ಈ ವರ್ಷ ತುಂಗಭದ್ರಾ ನದಿಯಲ್ಲಿ ನೀರು ಇರುವುದರಿಂದ ಭಕ್ತರು ಹರ್ಷಗೊಂಡಿದ್ದು, ಪುಣ್ಯಸ್ನಾನ ಮಾಡಿ ರಾಯರ ದರ್ಶನ ಪಡೆಯುತ್ತಿದ್ದಾರೆ. ವಯೋವೃದ್ಧರು ಮತ್ತು ಅಂಗವಿಕಲರಿಗೆ ನದಿದಡದಲ್ಲಿ ಸ್ನಾನ ಮಾಡುವುದಕ್ಕೆ ಪ್ರತ್ಯೇಕವಾಗಿ ನಳದ ವ್ಯವಸ್ಥೆ ಮಾಡಲಾಗಿದೆ. ಮಧ್ಯಾರಾಧನೆ ಶನಿವಾರ ನಡೆಯಲಿದೆ. ಮಠದ ವಸತಿ ಸಮುಚ್ಚಯಗಳೆಲ್ಲ ಭರ್ತಿಯಾಗಿವೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.