ADVERTISEMENT

ಮಂತ್ರಾಲಯ ಸದಾ ಜಾಗೃತ ತಾಣ: ಡಿ.ವೀರೇಂದ್ರ ಹೆಗ್ಗಡೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2022, 18:16 IST
Last Updated 4 ಮಾರ್ಚ್ 2022, 18:16 IST
ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀಸುಬುಧೇಂಧ್ರ ತೀರ್ಥರು ಧರ್ಮಸ್ಥಳ ಶ್ರೀಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಶುಕ್ರವಾರ ’ಗುರು ವೈಭವೋತ್ಸವ–2022‘ ಪ್ರಶಸ್ತಿ ನೀಡಿ ಗೌರವಿಸಿದರು
ಮಂತ್ರಾಲಯದಲ್ಲಿ ಶ್ರೀರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿ ಶ್ರೀಸುಬುಧೇಂಧ್ರ ತೀರ್ಥರು ಧರ್ಮಸ್ಥಳ ಶ್ರೀಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರಿಗೆ ಶುಕ್ರವಾರ ’ಗುರು ವೈಭವೋತ್ಸವ–2022‘ ಪ್ರಶಸ್ತಿ ನೀಡಿ ಗೌರವಿಸಿದರು   

ರಾಯಚೂರು: ಮಂತ್ರಾಲಯ ಶ್ರೀರಾಘವೇಂದ್ರ ಸ್ವಾಮಿಗಳ ಮಠವು ಸದಾ ಜಾಗೃತ ತಾಣವಾಗಿದೆ ಎಂದು ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ದೇವಸ್ಥಾನದ ಧರ್ಮಾಧಿಕಾರಿ ಡಿ.ವೀರೇಂದ್ರ ಹೆಗ್ಗಡೆ ಹೇಳಿದರು.

ಮಂತ್ರಾಲಯದಲ್ಲಿ ಶುಕ್ರವಾರದಿಂದ ಆರಂಭವಾದ ಗುರು ವೈಭವೋತ್ಸವದ ರಾಯರ ಪಟ್ಟಾಭಿಷೇಕಮಹೋತ್ಸವದಲ್ಲಿ ಅವರು ಮಾತನಾಡಿದರು.

‘ದೇವರ ಕಣ್ಣು ತಪ್ಪಿಸಿ ಮನುಷ್ಯ ಯಾವುದೇ ಕಾರ್ಯ ಮಾಡುವುದಕ್ಕೆ ಆಗುವುದಿಲ್ಲ. ಕಣ್ಣಿಗೆ ಕಾಣದ ಶಕ್ತಿ ಸದಾ ಜಾಗೃತವಾಗಿಯೇ ಇರುತ್ತದೆ. ಅದನ್ನು ದೇವರೆಂದು ಪೂಜಿಸುತ್ತಾರೆ‘ ಎಂದರು.

ADVERTISEMENT

ಮಠದ ಪೀಠಾಧಿಪತಿ ಶ್ರೀಸುಬುಧೇಂದ್ರ ತೀರ್ಥರು ಸುದ್ದಿಗಾರರೊಂದಿಗೆ ಮಾತನಾಡಿ, ’ವೈದ್ಯಕೀಯ ಶಿಕ್ಷಣದಲ್ಲಿ ಸೌಲಭ್ಯಗಳನ್ನು ಮತ್ತಷ್ಟು ವಿಸ್ತರಣೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಸಲಹೆ ನೀಡಲಾಗುವುದು‘ ಎಂದು ಹೇಳಿದರು.

ಸಂಜೆ ನಡೆದ ಸಮಾರಂಭದಲ್ಲಿ ಡಿ.ವೀರೇಂದ್ರ ಹೆಗ್ಗಡೆ ಅವರಿಗೆ ಮಂತ್ರಾಲಯ ಶ್ರೀಸುಬುಧೇಂದ್ರ ತೀರ್ಥರು ’ಗುರು ವೈಭವೋತ್ಸವ ಪ್ರಶಸ್ತಿ‘ ನೀಡಿ ಗೌರವಿಸಿದರು.

ಮಾರ್ಚ್‌ 9ರವರೆಗೂ ಕಾರ್ಯಕ್ರಮ ನಡೆಯಲಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.