
ಪ್ರಜಾವಾಣಿ ವಾರ್ತೆ
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ‘ಪ್ರಧಾನಮಂತ್ರಿ ಹುದ್ದೆಗೆ ಅರ್ಹರಾದವರು, ಸಮರ್ಥರು ನಮ್ಮ ರಾಜ್ಯದಲ್ಲಿ ಬಹಳ ನಾಯಕರಿದ್ದಾರೆ’ ಎಂದು ಸಿದ್ದರಾಮಯ್ಯ ಹೇಳಿದರು.
ಗುರುವಾರ ನಡೆದ ಮಾಧ್ಯಮಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ‘ಪ್ರಧಾನಿ ಹುದ್ದೆಗೆ ಕರ್ನಾಟಕದಿಂದ ಯಾರೂ ಅಭ್ಯರ್ಥಿ ಇಲ್ಲ ಎಂಬುದಾಗಿ ನಾನು ಹೇಳಿಲ್ಲ’ ಎಂದು ಸ್ಪಷ್ಟಪಡಿಸಿದರು.
‘ಪ್ರೆಸ್‌ಕ್ಲಬ್’ ನಲ್ಲಿ ಇತ್ತೀಚೆಗೆ ನಡೆದ ಮಾಧ್ಯಮ ಸಂವಾದದಲ್ಲಿ ಪತ್ರಕರ್ತರೊಬ್ಬರು ‘ಪ್ರಧಾನಿ ಹುದ್ದೆಗೆ ನೀವು ಅಭ್ಯರ್ಥಿ ಆಗುವಿರೇ ಎಂದು ಪ್ರಶ್ನಿಸಿದರು. ಕರ್ನಾಟಕದಿಂದ ನಾನು ಪ್ರಧಾನಿ ಅಭ್ಯರ್ಥಿ ಅಲ್ಲ. ಆಗುವುದೂ ಇಲ್ಲ ಎಂದು ಹೇಳಿದ್ದೆ. ಆದರೆ ಕೆಲ ಮಾಧ್ಯಮಗಳಲ್ಲಿ ತಪ್ಪಾಗಿ ವರದಿಯಾಗಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.