ADVERTISEMENT

4 ಎಕರೆಯಲ್ಲಿ ಗಾಂಜಾ ಪತ್ತೆ: ನಾಲ್ವರನ್ನು ವಶಕ್ಕೆ ಪಡೆದ ಚಿತ್ರದುರ್ಗ ಪೊಲೀಸರು

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2020, 15:13 IST
Last Updated 4 ಸೆಪ್ಟೆಂಬರ್ 2020, 15:13 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಚಿತ್ರದುರ್ಗ: ಮೊಳಕಾಲ್ಮುರು ತಾಲ್ಲೂಕಿನ ವಡೇರಹಳ್ಳಿಯಲ್ಲಿ ನಾಲ್ಕು ಎಕರೆಯಲ್ಲಿ ಬೆಳೆದಿದ್ದ ಗಾಂಜಾವನ್ನು ಪೊಲೀಸರು ಪತ್ತೆ ಮಾಡಿದ್ದು, ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ. ರಾಧಿಕಾ ನೇತೃತ್ವದಲ್ಲಿ ನಡೆದ ಭಾರಿ ದಾಳಿ ಇದಾಗಿದೆ. ಖಚಿತ ಮಾಹಿತಿಯ ಮೇರೆಗೆ ನಡೆದ ಈ ದಾಳಿಯಲ್ಲಿ ಸುಮಾರು ಒಂದು ಕೋಟಿ ಮೌಲ್ಯದ ಗಾಂಜಾವನ್ನು ಜಪ್ತಿ ಮಾಡಲಾಗಿದೆ.

ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ರುದ್ರೇಶ್, ಕೂಡ್ಲಗಿ ತಾಲ್ಲೂಕಿನ ಸುಮಂತ್, ಮೊಳಕಾಲ್ಮುರು ತಾಲ್ಲೂಕಿನ ರಾಂಪುರದ ಮಂಜುನಾಥ್ ಹಾಗೂ ಜಂಬುನಾಥ್ ಎಂಬುವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ADVERTISEMENT

ರಾಂಪುರದ ಮಂಜುನಾಥ್ ಎಂಬವರಿಗೆ ಸೇರಿದ ಜಮೀನನ್ನು ರುದ್ರೇಶ್ ಎಂಬಾತ ಗುತ್ತಿಗೆ ಪಡೆದಿದ್ದ. ಐದು ಎಕರೆ ಭೂಮಿಗೆ ವರ್ಷಕ್ಕೆ ಒಂದು ಲಕ್ಷ ನೀಡುತ್ತಿದ್ದ. ಐದು ಪೈಕಿ ನಾಲ್ಕು ಎಕರೆ ಪದೇಶದಲ್ಲಿ ಗಾಂಜಾ ಬೆಳೆಯಲಾಗಿತ್ತು ಎಂದು ಮೂಲಗಳು ಮಾಹಿತಿ ನೀಡಿವೆ. ಗಾಂಜಾ ಎಲ್ಲಿಗೆ ಪೂರೈಕೆ ಆಗುತ್ತಿತ್ತು ಎಂಬುದರ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.