ADVERTISEMENT

ಪತ್ರ ಎಸೆದದ್ದಕ್ಕೆ ವಿಷಾದ ವ್ಯಕ್ತಪಡಿಸಿದ ಮರಿತಿಬ್ಬೇಗೌಡ; ಮತ್ತೆ ಸದನದ ಕಲಾಪ ಆರಂಭ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 8:33 IST
Last Updated 4 ಫೆಬ್ರುವರಿ 2021, 8:33 IST
ಮರಿತಿಬ್ಬೇಗೌಡ
ಮರಿತಿಬ್ಬೇಗೌಡ   

ಬೆಂಗಳೂರು: ವಿಧಾನ ಪರಿಷತ್‌ನಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಉತ್ತರದಿಂದ ಸಿಟ್ಟಿಗೆದ್ದುಸಭಾಧ್ಯಕ್ಷರತ್ತ ಪತ್ರ ಎಸೆದಿದ್ದ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ವಿಷಾದ ವ್ಯಕ್ತಪಡಿಸಿದ್ದಾರೆ. ಇದೀಗ ಸದನದಲ್ಲಿ ಕಲಾಪ ಮತ್ತೆ ಆರಂಭಗೊಂಡಿದೆ.

ಸಚಿವರ ಮಾತಿನಿಂದ ಮನನೊಂದು ಪತ್ರ ಎಸೆದಿರುವುದಾಗಿ ಮರಿತಿಬ್ಬೇಗೌಡ ಸದನಕ್ಕೆ ತಿಳಿಸಿದ್ದು, ಘಟನೆ ಕುರಿತು ವಿಷಾದವನ್ನೂ ವ್ಯಕ್ತಪಡಿಸಿದರು. ತಾವು ದುರುದ್ದೇಶದಿಂದ ಮಾತನಾಡಿಲ್ಲ ಎಂದು ಗೃಹ ಸಚಿವ ಬೊಮ್ಮಾಯಿ ಅವರೂ ಸ್ಪಷ್ಟಪಡಿಸಿದ್ದಾರೆ.

ಬಳಿಕ ಸಭಾಪತಿ ಕೆ. ಪ್ರತಾಪಚಂದ್ರ ಶೆಟ್ಟಿ ಅವರು ಪ್ರಶ್ನೋತ್ತರ ಕಲಾಪ ಮುಂದುವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.