ADVERTISEMENT

ಮಾಸ್ಕ್ ಧರಿಸುವುದು ಕಡ್ಡಾಯ, ಬೆಂಗಳೂರಲ್ಲಿ 3 ಕೋವಿಡ್ ಕೇರ್ ಸೆಂಟರ್‌: ಯಡಿಯೂರಪ್ಪ

​ಪ್ರಜಾವಾಣಿ ವಾರ್ತೆ
Published 17 ಮಾರ್ಚ್ 2021, 11:23 IST
Last Updated 17 ಮಾರ್ಚ್ 2021, 11:23 IST
ಮುಖ್ಯಮಂತ್ರಿ ಯಡಿಯೂರಪ್ಪ
ಮುಖ್ಯಮಂತ್ರಿ ಯಡಿಯೂರಪ್ಪ    

ಬೆಂಗಳೂರು: ರಾಜ್ಯದಲ್ಲಿ ಜನರು ಮಾಸ್ಕ್ ಹಾಕುವುದನ್ನು ಮರೆತಿದ್ದಾರೆ. ಕೋವಿಡ್ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಮಾಸ್ಕ್ ಧರಿಸದಿದ್ದರೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಕೋವಿಡ್ ಸೋಂಕಿತರಿಗಾಗಿ ಹೆಚ್ಚುವರಿ ಹಾಸಿಗೆಗಳು, ಐಸಿಯುಗಳನ್ನು ಮೀಸಲಿಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದ್ದಾರೆ.

ಬೆಂಗಳೂರಲ್ಲಿ ಮತ್ತೆ ಕೋವಿಡ್ ಕೇರ್ ಸೆಂಟರ್: ಕೋವಿಡ್‌ ಸೋಂಕಿತರಿಗೆ ಚಿಕಿತ್ಸೆ ಒದಗಿಸುವ ದೃಷ್ಟಿಯಿಂದಬೆಂಗಳೂರಿನಲ್ಲಿ ಮೂರು ಕೋವಿಡ್ ಕೇರ್ ಸೆಂಟರ್‌ ಸ್ಥಾಪಿಸಲು ನಿರ್ಧರಿಸಲಾಗಿದೆ. ಅಲ್ಲದೆ, ರಾಜ್ಯದಲ್ಲಿರುವ 3,500ಕ್ಕೂ ಹೆಚ್ಚಿನ ಲಸಿಕಾ ಕೇಂದ್ರಗಳಲ್ಲಿ ಲಸಿಕೆ ಅಭಿಯಾನ ತೀವ್ರಗೊಳಿಸಲಾಗುವುದು. ಪ್ರತಿ ದಿನ 3 ಲಕ್ಷ ಜನರಿಗೆ ಲಸಿಕೆ ನೀಡುವ ಗುರಿ ಹಾಕಿಕೊಳ್ಳಲಾಗಿದೆ’ ಎಂದೂ ಮುಖ್ಯಮಂತ್ರಿ ಹೇಳಿದರು.

‘ಎರಡು ಮತ್ತು ಮೂರನೇ ಹಂತದ ನಗರಗಳು ಮತ್ತು ಆಸುಪಾಸಿನ ಪ್ರದೇಶಗಳಲ್ಲಿ ಮುನ್ನೆಚ್ಚರಿಕೆ ವಹಿಸಿ. ಹಳ್ಳಿಗಳಿಗೆ ಹಬ್ಬದಂತೆ ಎಚ್ಚರ ವಹಿಸಿ. ಸಣ್ಣ ಪಟ್ಟಣಗಳಲ್ಲಿ ರೆಫರಲ್ ವ್ಯವಸ್ಥೆ ಮತ್ತು ಆಂಬ್ಯುಲೆನ್ಸ್ ವ್ಯವಸ್ಥೆಗಳನ್ನು ಬಲಪಡಿಸಲು ಸೂಚನೆ ನಿಡಲಾಗಿದೆ’ ಎಂದೂ ಮುಖ್ಯಮಂತ್ರಿ ಹೇಳಿದರು.

‘ರಾಜ್ಯದಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಲಾಗುತ್ತಿದ್ದು, ಪ್ರಧಾನಿಯವರ ಮಾರ್ಗದರ್ಶನದಂತೆ ಕ್ರಮ ವಹಿಸಲಾಗುವುದು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.