ADVERTISEMENT

ಮಸ್ಕಿ ಫಲಿತಾಂಶ: ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಬಿಜೆಪಿಯ ಪ್ರತಾಪ್ ಗೌಡ ಪಾಟೀಲ್

​ಪ್ರಜಾವಾಣಿ ವಾರ್ತೆ
Published 2 ಮೇ 2021, 5:40 IST
Last Updated 2 ಮೇ 2021, 5:40 IST
ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಪ್ರತಾಪ್ ಗೌಡ ಪಾಟೀಲ್
ಮತ ಎಣಿಕೆ ಕೇಂದ್ರದಿಂದ ಹೊರ ನಡೆದ ಪ್ರತಾಪ್ ಗೌಡ ಪಾಟೀಲ್   

ರಾಯಚೂರು: ಮಸ್ಕಿ ವಿಧಾನಸಭಾ ಉಪಚುನಾವಣೆ ಮತದಾನ ಎಣಿಕೆ ಪ್ರಕ್ರಿಯೆ ಭರದಿಂದ ಸಾಗಿದ್ದು, ಕಾಂಗ್ರೆಸ್ ಅಭ್ಯರ್ಥಿ ಬಾರಿ ಅಂತರದ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಸೋಲುವುದು ನಿಶ್ಚಿತ ‌ಎನ್ನುವುದನ್ನು ಅರಿತು ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ ಅವರು ಮತ ಎಣಿಕೆ ಕೇಂದ್ರದಿಂದ ಹೊರ ನಡೆದರು.

'ಕ್ಷೇತ್ರದಲ್ಲಿ ವಿರೋಧಿ ಅಲೆ ಎದ್ದಿರುವುದು ಗೊತ್ತಾಗುತ್ತಿದೆ. ಅಭಿವೃದ್ಧಿ ಕೆಲಸಗಳನ್ನು ಮಾಡಿದಾಗ್ಯೂ ಜನರು ಬೆಲೆ ಕೊಟ್ಟಿಲ್ಲ. ನಿರೀಕ್ಷಿತ ಮತಗಟ್ಟೆಯಲ್ಲೂ ಬಿಜೆಪಿಗೆ ಮತಗಳು ಬಂದಿಲ್ಲ' ಎಂದು ಪ್ರತಾಪಗೌಡ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಸೋಲಿಗೆ ಏನು ಕಾರಣ ಎಂಬುದು ಆನಂತರ ಪಕ್ಷದ ಹಿರಿಯರು ಕುರಿತು ಚರ್ಚಿಸಲಿದ್ದಾರೆ. ಪಕ್ಷದ ‌ತೀರ್ಮಾನಕ್ಕೆ ಬದ್ಧವಾಗಿದ್ದೇನೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.