ADVERTISEMENT

ಮಸ್ಕಿ ಸಮಗ್ರ ಅಭಿವೃದ್ಧಿಗೆ ಒತ್ತು: ಸಿ.ಎಂ

​ಪ್ರಜಾವಾಣಿ ವಾರ್ತೆ
Published 20 ಮಾರ್ಚ್ 2021, 19:49 IST
Last Updated 20 ಮಾರ್ಚ್ 2021, 19:49 IST
ಮಸ್ಕಿಯಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿದರು. ಪ್ರತಾಪಗೌಡ ಪಾಟೀಲ ಇದ್ದಾರೆ.
ಮಸ್ಕಿಯಲ್ಲಿ ಶನಿವಾರ ಬಿಜೆಪಿ ಕಾರ್ಯಕರ್ತರ ಸಮಾವೇಶದಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಮಾತನಾಡಿದರು. ಪ್ರತಾಪಗೌಡ ಪಾಟೀಲ ಇದ್ದಾರೆ.   

ಮಸ್ಕಿ: ‘ನೀರಾವರಿ ಯೋಜನೆ ಮಾಡಿಕೊಡುವುದೂಸೇರಿದಂತೆ ಮಸ್ಕಿ ವಿಧಾನಸಭಾ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವೆ’ ಎಂದು ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಭರವಸೆ ನೀಡಿದರು.

ಮಸ್ಕಿಯಲ್ಲಿ ಶನಿವಾರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

‘ಮಸ್ಕಿ ಕ್ಷೇತ್ರ ವ್ಯಾಪ್ತಿಯಲ್ಲಿನ 6 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳಿಗೂ ನಾನು ಮತ್ತು ಸಚಿವರಾದ ಗೋವಿಂದ ಕಾರಜೋಳ,ಶ್ರೀರಾಮುಲು ಭೇಟಿ ನೀಡುತ್ತೇವೆ. ಎಲ್ಲರನ್ನೂ ಭೇಟಿಯಾಗಿ, ಅಹವಾಲು ಆಲಿಸಿ ಸಮಸ್ಯೆ ಪರಿಹರಿಸಲು ಪ್ರಯತ್ನಿಸುತ್ತೇವೆ‌’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.