ADVERTISEMENT

ಮಠ: ಸರ್ಕಾರದ ಮಧ್ಯಪ್ರವೇಶಕ್ಕೆ ಸಹಮತ

ಅಖಿಲ ಭಾರತ ವೀರಶೈವ ಮಹಾಸಭಾದ ಉಪಾಧ್ಯಕ್ಷ ಅಣಬೇರು ರಾಜಣ್ಣ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2022, 18:20 IST
Last Updated 24 ನವೆಂಬರ್ 2022, 18:20 IST
ಅಣಬೇರು ರಾಜಣ್ಣ
ಅಣಬೇರು ರಾಜಣ್ಣ   

ಚಿತ್ರದುರ್ಗ: ಮಠಗಳ ಆಡಳಿತವ್ಯವಸ್ಥೆಯಲ್ಲಿ ಸರ್ಕಾರ ಮಧ್ಯಪ್ರವೇಶ ಮಾಡುವುದಕ್ಕೆ ಅಖಿಲ ಭಾರತ ವೀರಶೈವ ಮಹಾಸಭಾದ ಸಹಮತ ಇದೆ ಎಂದು ಮಹಾಸಭಾದ ಉಪಾಧ್ಯಕ್ಷ ಅಣಬೇರು ರಾಜಣ್ಣ ತಿಳಿಸಿ
ದರು.

‘ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಕ ಮಾಡಲು ಸರ್ಕಾರ ಮುಂದಾಗಿರುವ ಕುರಿತು ಮಹಾಸಭಾದ ನಿಲುವೇನು’ ಎಂಬ ಮಾಧ್ಯಮ ಪ್ರತಿನಿಧಿಗಳ ಪ್ರಶ್ನೆಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಹೀಗೆ ಪ್ರತಿಕ್ರಿಯಿಸಿದರು.

‘ಮಠಕ್ಕೆ ಉತ್ತರಾಧಿಕಾರಿ ನೇಮಕ ಮಾಡುವ ಮುನ್ನ ಸರ್ಕಾರದ ಅನುಮತಿ ಪಡೆಯಬೇಕು ಎಂಬ ನಿಯಮ ಪಾಲನೆಯಾಗುತ್ತಿಲ್ಲ. ಬಹುತೇಕ ಮಠಾಧೀಶರು ಏಕ ಸದಸ್ಯ ಟ್ರಸ್ಟ್‌ ರಚಿಸಿಕೊಂಡು ತಮ್ಮ ಬಳಿ ಅಧಿಕಾರ ಇಟ್ಟುಕೊಂಡಿದ್ದಾರೆ. ಮಠದ ವ್ಯವಸ್ಥೆಯಲ್ಲಿ ಸುಧಾರಣೆ ತರುವ ಬಗ್ಗೆ ಬಹಿರಂಗವಾಗಿ ಚರ್ಚೆ ನಡೆಯುವ ಅಗತ್ಯವಿದೆ’ ಎಂದು ಅಭಿಪ್ರಾಯಪಟ್ಟರು.

ADVERTISEMENT

‘ಶಿಕ್ಷಣ ಹಾಗೂ ಅನ್ನದಾಸೋಹಕ್ಕೆ ಆದ್ಯತೆ ನೀಡಿದ್ದ ಮಠಗಳ ಬಗ್ಗೆ ಸಮಾಜದಲ್ಲಿ ಅನ್ಯ ಭಾವನೆ ಮೂಡುತ್ತಿದೆ. ಮಠದ ಆಸ್ತಿಯನ್ನುಅನೇಕ ಪೀಠಾಧ್ಯಕ್ಷರು ತಮ್ಮ ಹೆಸರಿಗೆ ನೋಂದಣಿ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ. ಮಠ ಭಕ್ತರ ಸ್ವತ್ತೇ ಹೊರತು ಪೀಠಾಧ್ಯಕ್ಷರದ್ದಲ್ಲ. ಮಠದ ವ್ಯವಸ್ಥೆ ಹಾಳಾಗಲು ಮಹಾಸಭಾ ಬಿಡುವುದಿಲ್ಲ. ಡಿ.23ರಿಂದ ಮೂರು ದಿನ ದಾವಣಗೆರೆಯಲ್ಲಿ ನಡೆಯುವ ಮಹಾಸಭಾದ ಅಧಿವೇಶನದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು’ ಎಂದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.