ADVERTISEMENT

ಮಾತೆ ಮಹಾದೇವಿ ಆರೋಗ್ಯ ಚಿಂತಾಜನಕ

​ಪ್ರಜಾವಾಣಿ ವಾರ್ತೆ
Published 14 ಮಾರ್ಚ್ 2019, 7:34 IST
Last Updated 14 ಮಾರ್ಚ್ 2019, 7:34 IST
   

ಬೆಂಗಳೂರು:ಕೂಡಲಸಂಗಮದ ಬಸವ ಧರ್ಮ ಪೀಠದ ಅಧ್ಯಕ್ಷೆ ಮಾತೆ ಮಹಾದೇವಿ ಅವರ ಆರೋಗ್ಯ ಸ್ಥಿತಿ ಚಿಂತಾಜನಕವಾಗಿದ್ದು ನಗರದ ಮಣಿಪಾಲ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಾರ್ಚ್‌ 9ರಂದು ಅವರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂತ್ರಕೋಶದ ತೊಂದರೆ, ಶ್ವಾಸಕೋಶದ ಸಮಸ್ಯೆ ಸೇರಿದಂತೆ ಬಹು ಅಂಗಾಂಗಗಳ ವೈಫಲ್ಯದಿಂದ ಬಳಲುತ್ತಿದ್ದ ಅವರನ್ನು ಅಂದಿನಿಂದಲೇ ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಮಣಿಪಾಲ ಆಸ್ಪತ್ರೆಯ ಅಧ್ಯಕ್ಷ ಡಾ.ಎಚ್‌. ಸುದರ್ಶನ ಬಲ್ಲಾಳ್‌ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.

ನಮ್ಮ ಆಸ್ಪತ್ರೆಯ ವೈದ್ಯರ ತಂಡ ಮಹಾದೇವಿ ಅವರ ಆರೋಗ್ಯ ಸ್ಥಿತಿಯ ಮೇಲೆ ಹೆಚ್ಚಿನ ಕಾಳಜಿ ವಹಿಸಿದೆ. ಅವರಿಗೆ ಡಯಾಲಿಸೀಸ್‌ ನಡೆದಿದೆ.

ADVERTISEMENT

ಶ್ವಾಸಕೋಶ, ಮೂತ್ರಪಿಂಡ ತಜ್ಞರು ಪ್ರತಿದಿನ ಸಮಾಲೋಚನೆ ನಡೆಸಿ ಅವರ ಆರೋಗ್ಯ ಸ್ಥಿತಿ ಸುಧಾರಿಸುವ ಬಗ್ಗೆ ಪ್ರಯತ್ನ ನಡೆಸುತ್ತಿದೆ. ಆಧುನಿಕ ಚಿಕಿತ್ಸಾ ಕ್ರಮಗಳನ್ನು ಅನುಸರಿಸುವ ಪ್ರಯತ್ನವೂ ನಡೆದಿದೆ ಎಂದು ಅವರು ಮಾಹಿತಿ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.