ಪಪ್ರಾತಿನಿಧಿಕ ಚಿತ್ರ
ಬೆಂಗಳೂರು: ಕಡ್ಡಾಯ ಶಿಕ್ಷಣ ಕಾಯ್ದೆ (ಆರ್‌ಟಿಇ) ಅಡಿ ಖಾಸಗಿ ಶಾಲೆಗಳಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆಗೆ ಮೇ 20ರವರೆಗೆ ಅವಕಾಶ ನೀಡಲಾಗಿದೆ.
ಅರ್ಜಿ ಸಲ್ಲಿಕೆ ಅವಧಿ ಏಪ್ರಿಲ್ 22ಕ್ಕೆ ಮುಕ್ತಾಯವಾಗಿತ್ತು. ಪೋಷಕರ ಕೋರಿಕೆಯ ಮೇರೆಗೆ ಅವಧಿ ವಿಸ್ತರಿಸಲಾಗಿದೆ. ಜೂನ್ 1ರಂದು ಆಯ್ಕೆಯಾದ ವಿದ್ಯಾರ್ಥಿಗಳ ಪಟ್ಟಿ ಪ್ರಕಟಿಸಲಾಗುವುದು. 5ರಂದು ಸೀಟು ಹಂಚಿಕೆ ಮಾಡಲಾಗುವುದು. 6ರಿಂದ 13ರವರೆಗೆ ಪ್ರವೇಶ ಪಡೆಯಬಹುದು ಎಂದು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ. ಕಾವೇರಿ ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.