ಎಂ.ಬಿ.ಪಾಟೀಲ
ಬೆಂಗಳೂರು: ಭಾರತ ಮತ್ತು ಸ್ವಿಟ್ಜರ್ಲೆಂಡ್ ಮಧ್ಯೆ ಆಗಿರುವ ಮುಕ್ತ ವ್ಯಾಪಾರ ಒಪ್ಪಂದದ ಅನುಕೂಲಗಳನ್ನು, ಕರ್ನಾಟಕವು ಪಡೆದುಕೊಳ್ಳುವ ವಿಚಾರವಾಗಿ ವಿಶ್ವ ಆರ್ಥಿಕ ವೇದಿಕೆಯ (ಡಬ್ಲ್ಯುಇಎಫ್) ನಿಯೋಗದ ಜತೆಗೆ ಚರ್ಚಿಸಲಾಯಿತು ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಹೇಳಿದ್ದಾರೆ.
ಡಬ್ಲ್ಯುಇಎಫ್‌ನ ದಕ್ಷಿಣ ಏಷ್ಯಾದ ಪ್ರತಿನಿಧಿ ಅದಿತಿ ವ್ಯಾಸ್ ಅವರ ನೇತೃತ್ವದ ನಿಯೋಗವು ಗುರುವಾರ ಎಂ.ಬಿ.ಪಾಟೀಲರನ್ನು ಭೇಟಿ ಮಾಡಿ, ಚರ್ಚೆ ನಡೆಸಿತು.
ಈ ಬಗ್ಗೆ ಪ್ರಕಟಣೆ ನೀಡಿರುವ ಸಚಿವರು, ‘ಸ್ವಿಟ್ಜರ್ಲೆಂಡ್ ಮತ್ತು ಕರ್ನಾಟಕ ರಾಜ್ಯ ಸರ್ಕಾರವು ವ್ಯಾಪಾರ, ವಾಣಿಜ್ಯ, ಹೂಡಿಕೆ ಕ್ಷೇತ್ರಗಳಲ್ಲಿನ ಅವಕಾಶಗಳನ್ನು ಬಳಕೆ ಮಾಡಿಕೊಳ್ಳುವ ಸಾಧ್ಯತೆಗಳನ್ನು ಸಭೆಯಲ್ಲಿ ಚರ್ಚಿಸಲಾಯಿತು’ ಎಂದು ತಿಳಿಸಿದ್ದಾರೆ.
‘ಹೊಸ ಕೈಗಾರಿಕೆಗಳ ಕ್ಲಸ್ಟರ್‌ಗಳ ಸ್ಥಾಪನೆ, ಪರಿಶುದ್ಧ ಜಲಜನಕ ಮತ್ತಿತರ ಕ್ಷೇತ್ರಗಳಲ್ಲಿ ಹೊಸ ಉದ್ದಿಮೆ ಅವಕಾಶಗಳ ಬಗ್ಗೆ ಸ್ವಿಟ್ಜರ್ಲೆಂಡ್ ಮತ್ತು ಕರ್ನಾಟಕದ ಪಾಲುದಾರಿಕೆಗೆ ವಿಪುಲ ಅವಕಾಶಗಳು ಇವೆ ಎಂದು ಅದಿತಿ ವ್ಯಾಸ್ ಅವರು ಅಭಿಪ್ರಾಯಪಟ್ಟರು. ಡಬ್ಲ್ಯುಇಎಫ್, ಸೌದಿ ಅರೇಬಿಯಾದಲ್ಲಿ ಎರಡು ವರ್ಷಕ್ಕೊಮ್ಮೆ ಸಮಾವೇಶ ನಡೆಸುತ್ತದೆ. ಅದರಲ್ಲಿ ಭಾಗಿಯಾಗುವಂತೆ ಆಮಂತ್ರಿಸಿದರು’ ಎಂದು ಹೇಳಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.