ಎಂ.ಬಿ. ಪಾಟೀಲ
– ಪ್ರಜಾವಾಣಿ ಚಿತ್ರ
ಬೆಂಗಳೂರು: ‘ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಅವರ ಟಿಎಂಟಿ ಸರಳು ತಯಾರಿಸುವ ಯೋಜನೆಗೆ ಹಿಂದಿನ ಬಿಜೆಪಿ ಸರ್ಕಾರ ಅನುಮೋದನೆ ನೀಡಿತ್ತು’ ಎಂದು ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ ತಿಳಿಸಿದರು.
ಸುದ್ದಿಗಾರರ ಜೊತೆ ಸೋಮವಾರ ಮಾತನಾಡಿದ ಅವರು, ‘ಈ ಯೋಜನೆಗೆ ತುಮಕೂರು ಜಿಲ್ಲೆಯ ಶಿರಾ ಕೈಗಾರಿಕಾ ಪ್ರದೇಶದಲ್ಲಿ 12 ಎಕರೆ ಜಮೀನು ಮಂಜೂರು ಮಾಡಲು 2023ರ ಜನವರಿ 2ರಂದು ನಡೆದಿದ್ದ ಉನ್ನತ ಮಟ್ಟದ ಏಕಗವಾಕ್ಷಿ ಸಮಿತಿ ಸಭೆ ತೀರ್ಮಾನಿಸಿತ್ತು’ ಎಂದರು.
‘ರನ್ಯಾ ಅವರು ನಿಗದಿತ ಅವಧಿಯಲ್ಲಿ ಹಣ ಪಾವತಿಸದ ಕಾರಣಕ್ಕೆ ಅವರಿಗೆ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿಯು ಈ ಜಮೀನು ಹಂಚಿಕೆ ಮಾಡಿಲ್ಲ’ ಎಂದೂ ಅವರು ಸ್ಪಷ್ಟಪಡಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.