ADVERTISEMENT

ಎಂಬಿಎ, ಎಂಸಿಎ ಪ್ರವೇಶ ಪರೀಕ್ಷೆ ಸುಗಮ

​ಪ್ರಜಾವಾಣಿ ವಾರ್ತೆ
Published 22 ಜೂನ್ 2025, 16:26 IST
Last Updated 22 ಜೂನ್ 2025, 16:26 IST
   

ಬೆಂಗಳೂರು: ಎಂಬಿಎ ಮತ್ತು ಎಂಸಿಎ ಕೋರ್ಸ್‌ಗಳ ಪ್ರವೇಶಕ್ಕೆ ಪಿಜಿಸಿಇಟಿ ಭಾನುವಾರ ಸುಗಮವಾಗಿ ನಡೆಯಿತು. ಎಂಬಿಎಗೆ ಶೇ 95.73 ಮತ್ತು ಎಂಸಿಎ ಕೋರ್ಸ್‌ಗೆ ಶೇ 93.85ರಷ್ಟು ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

ಬೆಂಗಳೂರು ಸೇರಿದಂತೆ ರಾಜ್ಯದ 12 ಜಿಲ್ಲೆಗಳ ಒಟ್ಟು 68 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT