ADVERTISEMENT

ಎಂಬಿಎ, ಎಂಸಿಎ: 3ನೇ ಸುತ್ತಿನ ಕೌನ್ಸೆಲಿಂಗ್ ನ.4ರಿಂದ: ಎಚ್. ಪ್ರಸನ್ನ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2025, 16:21 IST
Last Updated 2 ನವೆಂಬರ್ 2025, 16:21 IST
<div class="paragraphs"><p>ಕರ್ನಾಟಕ ಪರೀಕ್ಷಾ ಪ್ರಾಧಿಕಾರ</p></div>

ಕರ್ನಾಟಕ ಪರೀಕ್ಷಾ ಪ್ರಾಧಿಕಾರ

   

ಬೆಂಗಳೂರು: ‘ಎಂಬಿಎ, ಎಂಸಿಎ, ಎಂಇ, ಎಂ.ಟೆಕ್, ಎಂ.ಆರ್ಕ್ ಕೋರ್ಸ್‌ಗಳ ಪ್ರವೇಶಕ್ಕೆ ಮೂರನೇ ಸುತ್ತಿನ ಸೀಟು ಹಂಚಿಕೆಗೆ ಆಯ್ಕೆಗಳನ್ನು (ಇಚ್ಛೆ) ದಾಖಲಿಸಲು ಇದೇ 4ರಿಂದ 6ರವರೆಗೆ ಅವಕಾಶ ನೀಡಲಾಗಿದೆ’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ತಿಳಿಸಿದ್ದಾರೆ.

3ನೇ ಸುತ್ತಿನಲ್ಲಿ ಲಭ್ಯವಿರುವ ಸೀಟುಗಳ ವಿವರಗಳನ್ನು 4ರಂದು ಕೆಇಎ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು. ಆಸಕ್ತರು ₹25 ಸಾವಿರ ಕಾಷನ್ ಡೆಪಾಸಿಟ್ ಪಾವತಿಸಿ ಆಯ್ಕೆಗಳನ್ನು ದಾಖಲಿಸಬಹುದು ಎಂದು ತಿಳಿಸಿದ್ದಾರೆ.

ADVERTISEMENT

ಇದೇ 7ರಂದು ಮಧ್ಯಾಹ್ನ 2ಗಂಟೆಗೆ ತಾತ್ಕಾಲಿಕ ಫಲಿತಾಂಶ ಪ್ರಕಟವಾಗಲಿದೆ. 8ರಂದು ಮಧ್ಯಾಹ್ನ 2 ಗಂಟೆಗೆ ಅಂತಿಮ ಫಲಿತಾಂಶ ಪ್ರಕಟಿಸಲಾಗುವುದು. ಸೀಟು ಹಂಚಿಕೆಯಾದವರು ನ. 10ರಿಂದ 12ರವರೆಗೆ ಶುಲ್ಕ ಕಟ್ಟಿ ಸೀಟು ಖಾತರಿ ಚೀಟಿ ಡೌನ್‌ಲೋಡ್ ಮಾಡಿಕೊಂಡು 13ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದೂ ಅವರು ಸಲಹೆ ನೀಡಿದ್ದಾರೆ.

ಮೊದಲ ಮತ್ತು ಎರಡನೇ ಸುತ್ತಿನಲ್ಲಿ ಸಿಕ್ಕಿರುವ ಸೀಟು ರದ್ದುಪಡಿಸಿಕೊಳ್ಳಲು ನ. 6 ರವರೆಗೆ ಅವಕಾಶ ನೀಡಲಾಗಿದೆ. ಸೀಟು ರದ್ದುಪಡಿಸಿಕೊಂಡವರಿಗೆ 3ನೇ ಸುತ್ತಿನಲ್ಲಿ ಭಾಗವಹಿಸಲು ಅವಕಾಶ ಇರುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.