ADVERTISEMENT

ಮಾಜಿ ಸಚಿವ ಪಿ.ಎಂ.ನಾಡಗೌಡ ಪತ್ನಿ ವಿಯೋಗ

​ಪ್ರಜಾವಾಣಿ ವಾರ್ತೆ
Published 21 ನವೆಂಬರ್ 2018, 3:58 IST
Last Updated 21 ನವೆಂಬರ್ 2018, 3:58 IST
   

ಬಾಗಲಕೋಟೆ: ಮಾಜಿ ಸಚಿವ ಪಿ.ಎಂ.ನಾಡಗೌಡ ಪತ್ನಿ ಕಾಶಿಬಾಯಿ (88) ಬುಧವಾರ ಬೆಳಗಿನ ಜಾವ ಸ್ವಗೃಹದಲ್ಲಿ ನಿಧನರಾದರು.

ಕಾಶಿಬಾಯಿ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.

ಕಾಶಿಬಾಯಿ ಪತಿ ಪಿ.ಎಂ.ನಾಡಗೌಡ ಈ ಹಿಂದೆ ಎಸ್.ನಿಜಲಿಂಗಪ್ಪ ಸಂಪುಟದಲ್ಲಿ ಸಹಕಾರ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು.

ADVERTISEMENT

ಕಾಶಿಬಾಯಿ ಅವರಿಗೆ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಪಿ.ನಾಡಗೌಡ ಸೇರಿದಂತೆ ಐವರು ಪುತ್ರರು, ಮೂವರು ಪುತ್ರಿಯರು ಇದ್ದಾರೆ.

ಮೃತರ ಅಂತ್ಯಕ್ರಿಯೆ ಸಂಜೆ 4 ಗಂಟೆಗೆ ಬಾಗಲಕೋಟೆಯ ಬಳೂಲಮಠ ರುದ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.