
ಚಿಕ್ಕಬಳ್ಳಾಪುರ: ‘ಪ್ರಧಾನಿ ಅವರದ್ದು 56 ಇಂಚಿನ ಎದೆ ಎನ್ನುತ್ತಿದ್ದರು. ಆದರೆ ಅಮೆರಿಕ ಅಧ್ಯಕ್ಷರಿಗೆ ಹೆದರಿ ಮಕಾಡೆ ಮಲಗಿದರು. ಅಮೆರಿಕದ ಒತ್ತಡಕ್ಕೆ ಹೆದರಿದರು. ಈಗ 28 ಇಂಚಿನ ಎದೆ ಎನಿಸಿದೆ’ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಲೇವಡಿ ಮಾಡಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂತಹವರು ದೇಶವನ್ನು ಎಲ್ಲಿಗೆ ಕೊಂಡೊಯ್ಯುವರೋ ನೋಡಬೇಕು. ಇಬ್ಬರು, ಮೂವರು ಉದ್ಯಮಿಗಳ ಕೈಯಲ್ಲಿ ದೇಶದ ಸಂಪತ್ತಿದೆ. ವಿವಿಧ ದೊಡ್ಡ ಸಂಸ್ಥೆಗಳನ್ನೂ ಅವರ ಸುಪರ್ದಿಗೆ ವಹಿಸಿದ್ದಾರೆ. ಬ್ರಿಟಿಷರ ಕಾಲದ ಈಸ್ಟ್ ಇಂಡಿಯಾ ಕಂಪೆನಿಯ ಕಾಲಕ್ಕೆ ಕಾಲಿಡುತ್ತಿದ್ದೇವೆ ಎನಿಸುತ್ತದೆ ಎಂದು ಟೀಕಿಸಿದರು.
ನರೇಗಾ ಯೋಜನೆಯನ್ನು ವಿಬಿ–ಜಿ ರಾಮ್ ಜಿ ಎಂದು ಬದಲಿಸಿರುವುದರ ವಿರುದ್ಧ ಚಿಕ್ಕಬಳ್ಳಾಪುರಲ್ಲಿ 23ರಂದು ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯನ್ನು ಒಳಗೊಂಡು ಇಲ್ಲಿ ಸಮಾವೇಶ ನಡೆಯಲಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಸಚಿವರು ಪಾಲ್ಗೊಳ್ಳುವರು ಎಂದು ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.