ಕೆಇಎ
ಬೆಂಗಳೂರು: ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಮೊದಲ ಸುತ್ತಿನ ಸೀಟು ಹಂಚಿಕೆಯ ಅಂತಿಮ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸೋಮವಾರ ಪ್ರಕಟಿಸಿದೆ.
ರಾಜ್ಯದಲ್ಲಿ ಪ್ರಸಕ್ತ 889 ಎಂಡಿಎಸ್ ಸೀಟುಗಳು ಲಭ್ಯವಿದ್ದು, ಮೊದಲ ಸುತ್ತಿನಲ್ಲಿ 636 ಮಂದಿಗೆ ಸೀಟು ಹಂಚಿಕೆ ಮಾಡಲಾಗಿದೆ. ಅಭ್ಯರ್ಥಿಗಳು ಚಾಯ್ಸ್-1 ಆಯ್ಕೆ ಮಾಡಿಕೊಂಡು ಕಾಲೇಜುಗಳಿಗೆ ಪ್ರವೇಶ ಪಡೆಯಬಹುದು. ಪ್ರವೇಶ ಪ್ರಕ್ರಿಯೆಯ ವೇಳಾಪಟ್ಟಿಯನ್ನು ಜುಲೈ 15ರಂದು ಪ್ರಕಟಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಹೇಳಿದ್ದಾರೆ.
ನೀಟ್ ನೋಂದಣಿಗೆ ಜುಲೈ 17ರವರೆಗೆ ಅವಕಾಶ:
ವೈದ್ಯಕೀಯ ಕೋರ್ಸ್‌ಗಳ ಸೀಟು ಹಂಚಿಕೆ ಸಲುವಾಗಿ ಇದುವರೆಗೂ ನೋಂದಣಿ ಮಾಡದೇ ಇರುವವರಿಗೆ ಜುಲೈ 17ರವರೆಗೆ ಅವಕಾಶ ನೀಡಲಾಗಿದೆ. ಹೊಸದಾಗಿ ನೋಂದಣಿ ಮಾಡಿಕೊಂಡು, ಅರ್ಜಿ ಸಲ್ಲಿಸಬಹುದು. ಹಾಗೆಯೇ, ನೀಟ್ ರೋಲ್ ನಂಬರ್ ದಾಖಲಿಸುವವರಿಗೂ 17ರವರೆಗೆ ಅವಕಾಶ ಇದೆ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.