ADVERTISEMENT

ಮೇಕೆದಾಟು ಪಾದಯಾತ್ರೆ; ಸಿದ್ದರಾಮಯ್ಯ, ಡಿಕೆಶಿ ಸೇರಿ 29 ಮಂದಿಗೆ ಸಮನ್ಸ್‌

​ಪ್ರಜಾವಾಣಿ ವಾರ್ತೆ
Published 23 ಮೇ 2022, 19:32 IST
Last Updated 23 ಮೇ 2022, 19:32 IST
   

ಬೆಂಗಳೂರು: ಸಾಂಕ್ರಾಮಿಕ ಕಾಯಿಲೆಗಳ ಕಾಯ್ದೆ ಉಲ್ಲಂಘನೆ ಆರೋಪದಡಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತುಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೇರಿದಂತೆ ಒಟ್ಟು 29 ಜನರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಮನ್ಸ್‌ ಜಾರಿಗೊಳಿಸಿದೆ.

ಆರೋಪಿಗಳುಇದೇ 24 ರಂದು ಖುದ್ದಾಗಿ ಅಥವಾ ಪರವಾದ ವಕೀಲರ ಮುಖಾಂತರ ನ್ಯಾಯಾಲಯಕ್ಕೆ ಹಾಜ ರಾಗಿ ಸಮಜಾಯಿಷಿ ನೀಡುವಂತೆ ನ್ಯಾಯಾಧೀಶರು ಆದೇಶಿಸಿದ್ದಾರೆ.

‘ಮೇಕೆದಾಟು ಯೋಜನೆ ಜಾರಿಗೆ ಆಗ್ರಹಿಸಿ ಕಾಂಗ್ರೆಸ್‌ ಪಕ್ಷದ ವತಿಯಿಂದ ನಡೆಸಲಾದ ಪಾದಯಾತ್ರೆಯ ವೇಳೆ ಕೋವಿಡ್‌–19ರ ನಿಯಮಗಳನ್ನು ಉಲ್ಲಂಘಿಸಲಾಗಿದೆ’ ಎಂದು ಆರೋಪಿಸಿ ರಾಮನಗರ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ADVERTISEMENT

ಹೈಕೋರ್ಟ್ ಆದೇಶದಂತೆ 2022ರ ಜ. 13ಕ್ಕೆ ರಾಮನಗರದಲ್ಲಿ ಪಾದಯಾತ್ರೆ ಸ್ಥಗಿತಗೊಳಿಸಲಾಗಿತ್ತು. ಫೆ. 27ಕ್ಕೆ ರಾಮನಗರದಿಂದ ಪಾದಯಾತ್ರೆ ಯನ್ನು ಪುನಃ ಆರಂಭಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.