ಪ್ರಾತಿನಿಧಿಕ ಚಿತ್ರ
ಚಿತ್ರ: ಮೆಟಾ ಎಐ
ಬೆಂಗಳೂರು: ಭಾರತದ ಎಲ್ಲಾ ವೈದ್ಯಕೀಯ ಕಾಲೇಜುಗಳ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗೆ ಮುಖಚಹರೆ ಆಧಾರಿತ ಹಾಜರಾತಿ ವ್ಯವಸ್ಥೆ ಜಾರಿಗೊಳಿಸುವುದನ್ನು ರಾಷ್ಟ್ರೀಯ ವೈದ್ಯಕೀಯ ಆಯೋಗ ಕಡ್ಡಾಯಗೊಳಿಸಿದೆ.
‘ಹಾಜರಾತಿ ಪ್ರಕ್ರಿಯೆಯನ್ನು ಬಳಕೆದಾರ ಸ್ನೇಹಿಯನ್ನಾಗಿ ಮಾಡಲು ಕೃತಕ ಬುದ್ಧಿಮತ್ತೆ ಆಧಾರಿತ ತಂತ್ರಜ್ಞಾನವನ್ನು ಬಳಸಿಕೊಳ್ಳಬೇಕು. ಅದಕ್ಕಾಗಿ ಎಲ್ಲ ಅಧ್ಯಾಪಕರು ತಮ್ಮ ಮೊಬೈಲ್ ಫೋನ್‌ಗಳಿಗೆ ಮುಖ ಆಧಾರಿತ ಆಧಾರ್ ದೃಢೀಕರಣ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿಕೊಳ್ಳಬೇಕು. ಇದೇ ಮೇ 1ರಿಂದ ವ್ಯವಸ್ಥೆ ಅಳವಡಿಸಿಕೊಳ್ಳಬೇಕು’ ಎಂದು ಆಯೋಗ ತನ್ನ ಆದೇಶದಲ್ಲಿ ಸೂಚಿಸಿದೆ.
ವೈದ್ಯಕೀಯ ಕಾಲೇಜುಗಳಲ್ಲಿ ಪ್ರಸ್ತುತ ಬಯೊಮೆಟ್ರಿಕ್ ಹಾಜರಾತಿ ವ್ಯವಸ್ಥೆ ಇದೆ. ಹಲವು ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ಕರ್ತವ್ಯಕ್ಕೆ ಸರಿಯಾಗಿ ಹಾಜರಾಗುತ್ತಿಲ್ಲ. ಕಿರಿಯ ವೈದ್ಯರ ಬಳಿ ಕೆಲಸ ಮಾಡಿಸುತ್ತಾರೆ ಎಂಬ ದೂರುಗಳ ಕಾರಣದಿಂದ ಆಯೋಗ ಹೊಸ ಪದ್ಧತಿ ಅಳವಡಿಕೆಗೆ ಮುಂದಾಗಿದೆ. ಇನ್ನು ಮುಂದೆ ಅಧ್ಯಾಪಕರ ಹಾಜರಾತಿಯ ಮೇಲ್ವಿಚಾರಣೆಯನ್ನು ಆಯೋಗವೇ ನೇರವಾಗಿ ಮಾಡಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.