ADVERTISEMENT

ಕಾರವಾರಕ್ಕೆ ನರ್ಸಿಂಗ್ ಕಾಲೇಜು: ನಡ್ಡಾಗೆ ಮನವಿ

​ಪ್ರಜಾವಾಣಿ ವಾರ್ತೆ
Published 7 ಆಗಸ್ಟ್ 2024, 14:47 IST
Last Updated 7 ಆಗಸ್ಟ್ 2024, 14:47 IST
ಜೆ.ಪಿ. ನಡ್ಡಾ
ಜೆ.ಪಿ. ನಡ್ಡಾ   

ನವದೆಹಲಿ: ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲ್ಲೂಕಿಗೆ ನರ್ಸಿಂಗ್‌ ಕಾಲೇಜು ಮಂಜೂರು ಮಾಡಬೇಕು ಎಂದು ಆಗ್ರಹಿಸಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಜೆ.‍ಪಿ.ನಡ್ಡಾ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. 

‘ಕಾರವಾರ ತಾಲ್ಲೂಕಿನಲ್ಲಿ ಒಂದು ಸರ್ಕಾರಿ ವೈದ್ಯಕೀಯ ಕಾಲೇಜು ಇದೆ. ಆದರೆ, ನರ್ಸಿಂಗ್ ಕಾಲೇಜು ಇಲ್ಲ. ನರ್ಸಿಂಗ್ ಶಿಕ್ಷಣ ಪಡೆಯಲು ಜಿಲ್ಲೆಯ ವಿದ್ಯಾರ್ಥಿಗಳು ಬೇರೆ ಜಿಲ್ಲೆಗಳಿಗೆ ಹೋಗಬೇಕಾದ ಸ್ಥಿತಿ ಇದೆ. ಇದರಿಂದ ವಿದ್ಯಾರ್ಥಿಗಳಿಗೆ ತೊಂದರೆ ಆಗುತ್ತಿದೆ. ಈ ಸಮಸ್ಯೆ ಹಲವು ವರ್ಷಗಳಿಂದ ಇದೆ. ಜತೆಗೆ, ಆಸ್ಪತ್ರೆಯಲ್ಲಿ ತಜ್ಞ ನರ್ಸ್‌ಗಳ ಕೊರತೆಯೂ ಇದೆ’ ಎಂದು ಅವರು ಗಮನ ಸೆಳೆದಿದ್ದಾರೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT