ನವದೆಹಲಿ: ವೈದ್ಯಕೀಯ ಮೌಲ್ಯಮಾಪನ ಮತ್ತು ರೇಟಿಂಗ್ ಮಂಡಳಿಯ(ಎಂಎಆರ್‌ಬಿ) ನೂತನ ಅಧ್ಯಕ್ಷರಾಗಿ ಕರ್ನಾಟಕದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಮಾಜಿ ಉಪಕುಲಪತಿ ಡಾ. ಎಂ.ಕೆ. ರಮೇಶ್ ಅವರು ನೇಮಕಗೊಂಡಿದ್ದಾರೆ.
ದಾವಣಗೆರೆ ಜಿಲ್ಲೆಯ ಮಾಯಕೊಂಡದವರಾದ ರಮೇಶ್ ಅವರು ಮೈಸೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಿಂದ ಜನರಲ್ ಸರ್ಜರಿಯಲ್ಲಿ ಎಂಬಿಬಿಎಸ್ ಮತ್ತು ಎಂಎಸ್ ಪದವಿ ಪಡೆದಿದ್ದಾರೆ. ನಂತರ ಎಡಿನ್‌ಬರ್ಗ್‌ನ ರಾಯಲ್ ಕಾಲೇಜ್ ಆಫ್ ಸರ್ಜನ್ಸ್‌ನಿಂದ (ಎಫ್‌ಆರ್‌ಸಿಎಸ್) ಫೆಲೋಶಿಪ್ ಗಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.