ADVERTISEMENT

ವೈದ್ಯಕೀಯ ಕೋರ್ಸ್‌: ಶುಲ್ಕ ಹೆಚ್ಚಳ ಇಲ್ಲ

​ಪ್ರಜಾವಾಣಿ ವಾರ್ತೆ
Published 16 ಮೇ 2025, 0:30 IST
Last Updated 16 ಮೇ 2025, 0:30 IST
   

ಬೆಂಗಳೂರು: ವೈದ್ಯಕೀಯ ಕೋರ್ಸ್‌ಗಳ ಶುಲ್ಕವನ್ನು 2025–26ನೇ ಸಾಲಿಗೆ ಹೆಚ್ಚಳ ಮಾಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಖಾಸಗಿ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಸಲ್ಲಿಸಿದ ಶೇ 15ರಷ್ಟು ಶುಲ್ಕ ಹೆಚ್ಚಳದ ಬೇಡಿಕೆಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಭೆ ತಿರಸ್ಕರಿಸಿದೆ. 

‘2024–25ನೇ ಸಾಲಿನಲ್ಲಿ ಶೇ 10ರಷ್ಟು ಶುಲ್ಕ ಹೆಚ್ಚಳಕ್ಕೆ ಸಮ್ಮತಿ ನೀಡಲಾಗಿತ್ತು. ಈಗ ಮತ್ತೆ ಶುಲ್ಕ ಹೆಚ್ಚಳ ಮಾಡಿದರೆ ಪೋಷಕರಿಗೆ ಹೊರೆಯಾಗುತ್ತದೆ. ಹಾಗಾಗಿ, ಈ ವರ್ಷ ಶುಲ್ಕ ಹೆಚ್ಚಳ ಮಾಡದೇ ಇರಲು ನಿರ್ಧರಿಸಲಾಗಿದೆ. ಕಳೆದ ಸಾಲಿನ ಶುಲ್ಕವೇ ಮುಂದುವರಿಯಲಿದೆ’ ಎಂದು ಸಚಿವ ಶರಣಪ್ರಕಾಶ ಪಾಟೀಲ ಹೇಳಿದರು. 

ADVERTISEMENT

ಪ್ರಸ್ತುತ ಸರ್ಕಾರಿ ವೈದ್ಯಕೀಯ ಕಾಲೇಜುಗಳ ವಾರ್ಷಿಕ ಶುಲ್ಕ ₹50 ಸಾವಿರ, ಖಾಸಗಿ ವೈದ್ಯಕೀಯ ಕಾಲೇಜುಗಳಲ್ಲಿ ಸರ್ಕಾರಿ ಕೋಟಾ ಸೀಟುಗಳ ಶುಲ್ಕ ₹1,40,621 ಮತ್ತು ಖಾಸಗಿ ಕೋಟಾದ ಸೀಟುಗಳ ಶುಲ್ಕ ₹11,88,167 ಇದೆ. 

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.