ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಅವರ ತಂದೆಗೆಕೊರೊನಾ ವೈರಸ್ ಸೋಂಕು ತಗುಲಿರುವುದು ದೃಢವಾಗಿದೆ.
ಈ ಕುರಿತು ಸಚಿವ ಸುಧಾಕರ್ ಅವರೇ ಟ್ವೀಟ್ ಮಾಡಿ ಖಚಿತಪಡಿಸಿದ್ದಾರೆ.
‘ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ,’ ಎಂದು ಅವರು ಟ್ವೀಟ್‌ನಲ್ಲಿ ಹೇಳಿದ್ದಾರೆ.
ಇದಕ್ಕೂ ಹಿಂದೆ ಟ್ವೀಟ್ ಮಾಡಿದ್ದ ಸುಧಾಕರ್, ತಮ್ಮ ತಂದೆಗೆ ಜ್ವರ, ಕೆಮ್ಮು ಬಂದಿರುವುದಾಗಿಯೂ, ಆಸ್ಪತ್ರೆಗೆ ದಾಖಲಿಸಿ ಕೋವಿಡ್ ಪರೀಕ್ಷೆ ನಡೆಸಿ ವರದಿಗಾಗಿ ಕಾಯುತ್ತಿರುವುದಾಗಿಯೂ ತಿಳಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.