ADVERTISEMENT

ಸಚಿವ ಸುಧಾಕರ್‌ ಪತ್ನಿ, ಮಗಳಿಗೂ ಕೊರೊನಾ ವೈರಸ್‌ ಸೋಂಕು

​ಪ್ರಜಾವಾಣಿ ವಾರ್ತೆ
Published 23 ಜೂನ್ 2020, 2:11 IST
Last Updated 23 ಜೂನ್ 2020, 2:11 IST
ಡಾ. ಕೆ. ಸುಧಾಕರ್‌
ಡಾ. ಕೆ. ಸುಧಾಕರ್‌    

ಬೆಂಗಳೂರು: ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್‌ ಅವರ ಪತ್ನಿ ಹಾಗೂ ಮಗಳಿಗೂ ಕೊರೊನಾ ವೈರಸ್‌‌ ಸೋಂಕು ಇರುವುದು ದೃಢಪಟ್ಟಿದೆ.

ಈ ಕುರಿತು ಸಚಿವ ಸುಧಾಕರ್‌ ಅವರು ಟ್ವಿಟರ್‌ನಲ್ಲಿಮಾಹಿತಿ ಖಚಿತಪಡಿಸಿದ್ದಾರೆ.

‘ನಮ್ಮ ಕುಟುಂಬದ ಕೋವಿಡ್ ಪರೀಕ್ಷಾ ವರದಿ ಬಂದಿದ್ದು ನನ್ನ ಪತ್ನಿ ಹಾಗೂ ಮಗಳಿಗೆ ಕೊರೊನಾ ಪಾಸಿಟಿವ್ ಬಂದಿದೆ. ಅವರಿಬ್ಬರು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನನ್ನ ಇಬ್ಬರು ಗಂಡು ಮಕ್ಕಳು ಮತ್ತು ನನಗೆ ಕೊರೊನಾ ನೆಗೆಟಿವ್ ಬಂದಿದೆ. ನಮ್ಮೆಲ್ಲರ ಒಳಿತಿಗಾಗಿ ಪ್ರಾರ್ಥಿಸಿದ, ಶುಭಕೋರಿದ ಎಲ್ಲರಿಗೂ ನಾನು ಆಭಾರಿಯಾಗಿದ್ದೇನೆ’ ಎಂದು ಟ್ವೀಟ್‌ನಲ್ಲಿ ತಿಳಿಸಿದ್ದಾರೆ.

ADVERTISEMENT

ಸೋಮವಾರ ಸುಧಾಕರ್‌ ಅವರ ತಂದೆಗೂ ಸೋಂಕು ತಗುಲಿರುವುದುದೃಢಪಟ್ಟಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.