ಬೆಂಗಳೂರು: ವೈದ್ಯಕೀಯ ವಿದ್ಯಾರ್ಥಿಯೊಬ್ಬರಿಂದ ನಿಗದಿತ ಶುಲ್ಕಕ್ಕಿಂತ ಹೆಚ್ಚುವರಿ ವಸೂಲಿ ಮಾಡಿದ್ದ ₹8 ಲಕ್ಷವನ್ನು ಮಂಗಳೂರಿನ ಜಿ.ಆರ್. ವೈದ್ಯಕೀಯ ಕಾಲೇಜು ಹಿಂದಿರುಗಿಸಿದೆ.
2022-23ನೇ ಸಾಲಿನ ಪ್ರವೇಶದ ವೇಳೆ ಹೆಚ್ಚುವರಿಯಾಗಿ ₹8 ಲಕ್ಷ ವಸೂಲಿ ಮಾಡಲಾಗಿದೆ ಎಂದು ವಿದ್ಯಾರ್ಥಿ ಆರ್.ಕೆ. ಆದಿತ್ಯ ಶುಲ್ಕ ನಿಯಂತ್ರಣ ಸಮಿತಿಗೆ ದೂರು ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಸಮಿತಿ ಹೆಚ್ಚುವರಿ ಹಣ ಹಿಂದಿರುಗಿಸುವಂತೆ ಸೂಚನೆ ನೀಡಿತ್ತು.
ದೂರುದಾರ ಮತ್ತು ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರನ್ನು ವಿಚಾರಣೆ ನಡೆಸಿ ಪ್ರಕರಣವನ್ನು ಇತ್ಯರ್ಥಪಡಿಸಿದ್ದು, ವಸೂಲಿ ಮಾಡಿದ್ದ ಹೆಚ್ಚುವರಿ ಶುಲ್ಕವನ್ನು ಹಿಂದುರುಗಿಸಲು ಕಾಲೇಜು ಆಡಳಿತ ಮಂಡಲಿ ಒಪ್ಪಿದೆ ಎಂದು ಸಮಿತಿ ಅಧ್ಯಕ್ಷ ನ್ಯಾಯಮೂರ್ತಿ ಬಿ. ಶ್ರೀನಿವಾಸಗೌಡ ಮಾಹಿತಿ ನೀಡಿದ್ದಾರೆ.
8ರಿಂದ ಎನ್‌ಆರ್‌ಐ ದಾಖಲೆ ಪರಿಶೀಲನೆ:
ಎನ್‌ಆರ್‌ಐ ಕೋಟಾದ ಅಡಿ ಕರ್ನಾಟಕದಲ್ಲಿ ವೈದ್ಯಕೀಯ ಸೀಟುಗಳಿಗೆ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳ ದಾಖಲೆ ಪರಿಶೀಲನೆಯನ್ನು ಜುಲೈ 8ರಿಂದ ಜುಲೈ 10ರವರೆಗೆ ನಡೆಸಲಾಗುತ್ತದೆ. ಮಲ್ಲೇಶ್ವರದಲ್ಲಿರುವ ಕೆಇಎ ಕಚೇರಿಗೆ ಹಾಜರಾಗಿ ಪರಿಶೀಲನೆ ಮಾಡಿಸಿಕೊಳ್ಳಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೇಳಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.