ADVERTISEMENT

ವೈದ್ಯಕೀಯ ಸೀಟ್ ಮ್ಯಾಟ್ರಿಕ್ಸ್ ಪ್ರಕಟ

​ಪ್ರಜಾವಾಣಿ ವಾರ್ತೆ
Published 30 ಜೂನ್ 2019, 20:00 IST
Last Updated 30 ಜೂನ್ 2019, 20:00 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಂಗಳೂರು: ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಭಾನುವಾರ ಸೀಟ್ ಮ್ಯಾಟ್ರಿಕ್ಸ್ ಪ್ರಕಟಿಸಲಾಗಿದೆ.

ಸುಮಾರು 3,900 ಸರ್ಕಾರಿ ವೈದ್ಯಕೀಯ ಸೀಟುಗಳು ಲಭ್ಯ ಇವೆ. ವಿವಿಧ ವರ್ಗ, ಕಾಲೇಜುಗಳಲ್ಲಿ ಲಭ್ಯ ಇರುವ ಸೀಟುಗಳ ವಿವರಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವೆಬ್ ಸೈಟ್‌ನಲ್ಲಿ (kea.kar.nic.in) ಪ್ರಕಟಿಸಲಾಗಿದೆ.

ಜುಲೈ 3ರ ವರೆಗೆ ಆಯ್ಕೆ ನಮೂದಿಸಲು ಅವಕಾಶ ನೀಡಲಾಗಿದೆ ಎಂದು ಪ್ರಾಧಿಕಾರದ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.