ADVERTISEMENT

ಆರೋಗ್ಯ ಸಿಬ್ಬಂದಿ ಮುಷ್ಕರ ನಡೆಸಿದರೆ ಕ್ರಮ

​ಪ್ರಜಾವಾಣಿ ವಾರ್ತೆ
Published 5 ಅಕ್ಟೋಬರ್ 2020, 18:44 IST
Last Updated 5 ಅಕ್ಟೋಬರ್ 2020, 18:44 IST

ಬೆಂಗಳೂರು: ಆರೋಗ್ಯ ಸೇವೆಗಳಿಗೆ ಸಂಬಂಧಿಸಿದ ಕೆಲಸಗಳನ್ನು ಮಾಡದೆ ಅಸಹಕಾರ ತೋರಿಸುವುದು, ಮುಷ್ಕರ ಮಾಡುವುದನ್ನು ವಿಪತ್ತು ನಿರ್ವಹಣಾ ಕಾಯ್ದೆಯ ಉಲ್ಲಂಘನೆ ಎಂದೇ ಪರಿಗಣಿಸಲಾಗುತ್ತದೆ. ಮುಷ್ಕರಗಳಲ್ಲಿ ತೊಡಗುವ ಸಿಬ್ಬಂದಿಗೆ ದಂಡ ವಿಧಿಸಲಾಗುತ್ತದೆ ಎಂದು ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ.

ಈ ಕುರಿತು ಸೋಮವಾರ ಆದೇಶ ಹೊರಡಿಸಿರುವ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯ್‌ ಭಾಸ್ಕರ್, ಆರೋಗ್ಯ ಸೇವೆಯಲ್ಲಿ ತೊಡಗಿಕೊಂಡಿರುವ ಸಿಬ್ಬಂದಿ ಮುಷ್ಕರಗಳನ್ನು ನಡೆಸುವುದು, ಅಸಹಕಾರ ವ್ಯಕ್ತಪಡಿಸುವುದು, ವರದಿಗಳನ್ನು ನೀಡದೇ ಇರುವುದು, ಅವಿಧೇಯತೆ ತೋರಿಸುವುದು, ಮೇಲಧಿಕಾರಿಗಳ ಆದೇಶ ಪಾಲನೆ ಮಾಡದೇ ಇರುವಂತಹ ಚಟುವಟಿಕೆಗಳನ್ನು ನಿಷೇಧಿಸಲಾಗಿದೆ ಎಂದು ಹೇಳಿದ್ದಾರೆ.

ಸಾರ್ವಜನಿಕ ವಲಯದ ಅಧಿಕಾರಿಗಳು ಅಥವಾ ಸಿಬ್ಬಂದಿ, ಕಾಯಂ, ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ಆರೋಗ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವಸಿಬ್ಬಂದಿಗೂ ಈ ಆದೇಶ ಅನ್ವಯವಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.