ಬೆಂಗಳೂರು: ಸಿ.ಡಿ.ಪ್ರಕರಣದ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗಾಗಿ ಬೌರಿಂಗ್ ಆಸ್ಪತ್ರೆಗೆ ಕರೆತರಲಾಗಿದೆ.
ತನಿಖಾಧಿಕಾರಿಯಾದ ಎಂ.ಸಿ. ಕವಿತಾ ಅವರು ಯುವತಿಯನ್ನು ಇನ್ನೋವಾ ಕಾರಿನಲ್ಲಿ ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದಾರೆ.
ವೈದ್ಯರ ತಂಡ ಯುವತಿಯನ್ನು ಪರೀಕ್ಷೆಗೆ ಒಳಪಡಿಸಲಿದೆ.
ನಂತರ, ಮಹಜರು ಪ್ರಕ್ರಿಯೆಗಾಗಿ ಯುವತಿಯನ್ನು ಪೊಲೀಸರು ಕರೆದೊಯ್ಯಲಿದ್ದಾರೆ. ಬೌರಿಂಗ್ ಆಸ್ಪತ್ರೆ ಬಳಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.