ADVERTISEMENT

ಬರ: ಜಿಲ್ಲಾಧಿಕಾರಿ, ಸಿಇಒಗಳ ಸಭೆಗೆ ಸಿಎಂ ಸೂಚನೆ

ಯೋಜನೆಗಳ ಅನುಷ್ಠಾನ ಕುರಿತ ಚರ್ಚೆ

​ಪ್ರಜಾವಾಣಿ ವಾರ್ತೆ
Published 1 ಜೂನ್ 2019, 18:55 IST
Last Updated 1 ಜೂನ್ 2019, 18:55 IST
ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರೊಂದಿಗೆ ಚರ್ಚೆ ನಡೆಸಿದರು.
ಬೆಂಗಳೂರಿನಲ್ಲಿ ಶನಿವಾರ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್‌ ಅವರೊಂದಿಗೆ ಚರ್ಚೆ ನಡೆಸಿದರು.   

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ತೀವ್ರಗೊಂಡಿದ್ದು,ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯನ್ನು ತಕ್ಷಣ ಕರೆಯುವಂತೆ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಸೂಚಿಸಿದ್ದಾರೆ.

ಇಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಅನುಷ್ಠಾನ, ಪರಿಶೀಲನೆ ಕುರಿತು ಮುಖ್ಯ ಕಾರ್ಯದರ್ಶಿ ಟಿ.ಎಂ.ವಿಜಯಭಾಸ್ಕರ್ ಅವರೊಂದಿಗೆ ನಡೆಸಿದ ಚರ್ಚೆಯ ವೇಳೆ ಅವರು ಈ ಸೂಚನೆ ನೀಡಿದರು.

‘ರಾಜ್ಯದ ಬರ ಪರಿಸ್ಥಿತಿ ನಿರ್ವಹಣೆ, ಬಜೆಟ್‌ನಲ್ಲಿಘೋಷಿಸಿದ ಕಾರ್ಯಕ್ರಮಗಳನ್ನು ನಿಗದಿತ ಕಾಲಮಿತಿಯಲ್ಲಿ ಅನುಷ್ಠಾನಗೊಳಿಸಬೇಕು. ಕಾರ್ಯಕ್ರಮಗಳ ಅನುಷ್ಠಾನದಲ್ಲಿ ಯಾವುದೇ ಲೋಪವಾಗಿದ್ದರೆ, ನಿಧಾನವಾಗುತ್ತಿದ್ದರೆ, ಇದಕ್ಕೆ ಕಾರಣಗಳನ್ನು ಅರಿಯಬೇಕು’ ಎಂದು ಅವರು ತಾಕೀತು ಮಾಡಿದರು.

ADVERTISEMENT

‘ಶಿಕ್ಷಣ, ಆರೋಗ್ಯ ಹಾಗೂ ವಸತಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡಬೇಕು. ಶಿಕ್ಷಣದ ಗುಣಮಟ್ಟ ಖಾತರಿಪಡಿಸಲು ಹಾಗೂ ಶಾಲಾ ಕಾಲೇಜುಗಳ ಮೂಲಸೌಕರ್ಯಕ್ಕೆ ಗಮನ ಕೊಡಬೇಕು. ಈಗಾಗಲೇ ಆರಂಭಿಸಲಾದ ಸರ್ಕಾರಿ ಆಂಗ್ಲ ಮಾಧ್ಯಮ ಶಾಲೆಗಳಲ್ಲಿ ಅತ್ಯುತ್ತಮ ಶಿಕ್ಷಣ ದೊರಕುವಂತೆ ಖಾತರಿಪಡಿಸಬೇಕು’ ಎಂದು ಸೂಚಿಸಿದರು.

ಆಸ್ಪತ್ರೆಗಳಲ್ಲಿ ಸಾರ್ವಜನಿಕರಿಗೆ ಉತ್ತಮ ಸೇವೆ ದೊರಕಲೇಬೇಕು ಎಂದ ಅವರು, ಅರ್ಹ ಫಲಾನುಭವಿಗಳಿಗೆ ವಸತಿ ಯೊಜನೆಗಳು ದೊರಕಬೇಕು ಎಂದರು.

ನಗರ ಪ್ರದೇಶಗಳಲ್ಲಿಮೂಲಸೌಕರ್ಯ, ತ್ಯಾಜ್ಯ ನಿರ್ವಹಣೆಗೆ ಆದ್ಯತೆ ನೀಡಬೇಕು. ಬೆಂಗಳೂರು ನಗರದಲ್ಲಿ ಸಂಚಾರ ದಟ್ಟಣೆ ನಿವಾರಣೆಗೆ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.