ADVERTISEMENT

ರಾಜ್ಯ ಸರ್ಕಾರದ ವರ್ಷಾಚರಣೆ ಸಂದರ್ಭದಲ್ಲೇ ಕಾಂಗ್ರೆಸ್‌ ನಾಯಕರ ಸಭೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 27 ಜುಲೈ 2020, 7:53 IST
Last Updated 27 ಜುಲೈ 2020, 7:53 IST
ಕೆಪಿಸಿಸಿ ಕಚೇರಿಯಲ್ಲಿ ಸಭೆ ಸೇರಿರುವ ಕಾಂಗ್ರೆಸ್‌ ನಾಯಕರು
ಕೆಪಿಸಿಸಿ ಕಚೇರಿಯಲ್ಲಿ ಸಭೆ ಸೇರಿರುವ ಕಾಂಗ್ರೆಸ್‌ ನಾಯಕರು   

ಬೆಂಗಳೂರು: ಇಲ್ಲಿನ ಕೆಪಿಸಿಸಿ ಕಚೇರಿಯಲ್ಲಿ ಸಭೆ ಸೇರಿರುವ ಕಾಂಗ್ರೆಸ್‌ ನಾಯಕರು ಹಲವು ವಿಚಾರಗಳ ಬಗ್ಗೆ ಗಂಭೀರ ಚರ್ಚೆ ನಡೆಸಿದ್ದಾರೆಂದು ತಿಳಿದುಬಂದಿದೆ

ರಾಜ್ಯ ಸರ್ಕಾರ ಒಂದು ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಬಿ.ಎಸ್‌.ಯಡಿಯೂರಪ್ಪ ಕಾರ್ಯಕ್ರಮ ಹಮ್ಮಿಕೊಂಡಿರುವ ಸಂದರ್ಭದಲ್ಲೇ ನಡೆದಿರುವ ಕಾಂಗ್ರೆಸ್‌ ನಾಯಕರ ಸಭೆ ಕುತೂಹಲಕ್ಕೆ ಕಾರಣವಾಗಿದೆ.

ಕೋವಿಡ್‌ ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಮೇಲೆ ಭ್ರಷ್ಟಾಚಾರದ ಗಂಭೀರ ಆರೋಪ ಮಾಡಿರುವ ಕಾಂಗ್ರೆಸ್‌ ನಾಯಕರು ಮುಂದಿನ ದಿನಗಳಲ್ಲಿ ಯಾವ ನಡೆ ಅನುಸರಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ.

ADVERTISEMENT

ಸಭೆಯಲ್ಲಿ ಭಾಗವಹಿಸಿರುವ ಬಗ್ಗೆ ಟ್ವೀಟ್‌ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, 'ಕೆಪಿಸಿಸಿ ಕಚೇರಿಯಲ್ಲಿ ಇಂದು ನಡೆದ ಪಕ್ಷದ ಹಿರಿಯ ಮುಖಂಡರ ಸಭೆಯಲ್ಲಿ ಭಾಗವಹಿಸಿದೆ. ಸಭೆಯಲ್ಲಿ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್‌, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ, ಮಾಜಿ ಕೇಂದ್ರ ಸಚಿವ ಕೆ.ಎಚ್‌. ಮುನಿಯಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಈಶ್ವರ್‌ ಖಂಡ್ರೆ, ಸಲೀಂ ಅಹ್ಮದ್‌, ರಮೇಶ್ ಕುಮಾರ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು' ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.