ADVERTISEMENT

ಅಲೆಮಾರಿ ಮುಖಂಡರ ಸಭೆ ಇಂದು: ಎಚ್. ಆಂಜನೇಯ ಅಧ್ಯಕ್ಷತೆ

​ಪ್ರಜಾವಾಣಿ ವಾರ್ತೆ
Published 4 ಜುಲೈ 2025, 19:17 IST
Last Updated 4 ಜುಲೈ 2025, 19:17 IST
ಎಚ್. ಆಂಜನೇಯ
ಎಚ್. ಆಂಜನೇಯ   

ಬೆಂಗಳೂರು: ಕರ್ನಾಟಕ ಪರಿಶಿಷ್ಟ ಜಾತಿ ಅಲೆಮಾರಿ ಅಭಿವೃದ್ಧಿ ವೇದಿಕೆಯು ಶನಿವಾರ (ಜು.5) ಬೆಳಿಗ್ಗೆ 10.30ಕ್ಕೆ ಶಿವಾನಂದ ವೃತ್ತದ ಬಳಿಯಿರುವ ಗಾಂಧಿ ಭವನದಲ್ಲಿ ಅಲೆಮಾರಿ ಮುಖಂಡರ ಸಭೆ ಹಮ್ಮಿಕೊಂಡಿದೆ. 

ಸಮುದಾಯ ಎದುರಿಸುತ್ತಿರುವ ಸವಾಲು, ಸಮಸ್ಯೆಗಳ ಬಗ್ಗೆ ಸಭೆಯಲ್ಲಿ ಚಿಂತನ ಮಂಥನ ನಡೆಯಲಿದೆ. ಮಾಜಿ ಸಚಿವ ಎಚ್. ಆಂಜನೇಯ ಅವರು ಸಭೆಯ ಅಧ್ಯಕ್ಷತೆ ವಹಿಸುತ್ತಾರೆ.

ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಮಾವಳ್ಳಿ ಶಂಕರ್, ಕವಿ ವಡ್ಡಗೆರೆ ನಾಗರಾಜಯ್ಯ, ಪ್ರಾಧ್ಯಾಪಕ ಎ.ಎಸ್. ಪ್ರಭಾಕರ್, ಪದವಿಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಬಾಲಗುರುಮೂರ್ತಿ ಅವರು ಅತಿಥಿಗಳಾಗಿ ಭಾಗವಹಿಸುತ್ತಾರೆ ಎಂದು ವೇದಿಕೆಯ ಸಂಘಟಕರಾದ ಶಾಂತಕುಮಾರ್ ಮತ್ತು ಸಣ್ಣಮಾರಪ್ಪ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.