
ಪ್ರಜಾವಾಣಿ ವಾರ್ತೆ
ಮೇಕೆದಾಟು ಪ್ರದೇಶ
ನವದೆಹಲಿ: ಪ್ರಸ್ತಾವಿತ ಮೇಕೆದಾಟು ಯೋಜನೆ ಕುರಿತ ಅರ್ಜಿಯ ವಿಚಾರಣೆಯನ್ನು ನವೆಂಬರ್ 6ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.
ಅರ್ಜಿಯ ತುರ್ತು ವಿಚಾರಣೆ ನಡೆಸಬೇಕು ಎಂದು ಕರ್ನಾಟಕ ಸರ್ಕಾರವು ಕೋರಿತ್ತು. ದೀಪಾವಳಿ ಬಳಿಕ ವಿಸ್ತೃತ ವಿಚಾರಣೆ ನಡೆಸುವುದಾಗಿ ನ್ಯಾಯಪೀಠ ಭರವಸೆ ನೀಡಿತ್ತು. ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ನೇತೃತ್ವದ ಪೀಠವು ಬುಧವಾರ ಪ್ರಕರಣದ ವಿಚಾರಣೆ ನಡೆಸಬೇಕಿತ್ತು. ಬೇರೆ ಪ್ರಕರಣವೊಂದರ ಬಗ್ಗೆ ಸಾಂವಿಧಾನಿಕ ಪೀಠದಲ್ಲಿ ವಿಚಾರಣೆ ಇದ್ದ ಕಾರಣ ಪೀಠವು ಮೇಕೆದಾಟು ಅರ್ಜಿಯ ವಿಚಾರಣೆ ನಡೆಸಲಿಲ್ಲ. 6ರಂದು ವಿಚಾರಣೆಗೆ ಪಟ್ಟಿ ಮಾಡಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.