ADVERTISEMENT

ನ್ಯಾಯಾಲಯದ ಛೀಮಾರಿಗಾದರೂ ಕಾಂಗ್ರೆಸ್ ತಲೆಬಾಗುವುದೇ: ಸಚಿವ ಸುಧಾಕರ್‌ ಪ್ರಶ್ನೆ

ಪ್ರಜಾವಾಣಿ ವೆಬ್‌ ಡೆಸ್ಕ್‌ 
Published 12 ಜನವರಿ 2022, 12:44 IST
Last Updated 12 ಜನವರಿ 2022, 12:44 IST
ಡಾ.ಕೆ.ಸುಧಾಕರ್
ಡಾ.ಕೆ.ಸುಧಾಕರ್   

ಬೆಂಗಳೂರು: ಮೇಕೆದಾಟು ಪಾದಯಾತ್ರೆ ಕುರಿತು ನ್ಯಾಯಾಲಯವು ಅಸಮಾಧಾನ ವ್ಯಕ್ತಪಡಿಸಿದ ಬೆನ್ನಲ್ಲೇ ಆರೋಗ್ಯ ಸಚಿವ ಡಾ.ಕೆ.ಸುಧಾಕರ್‌ ಅವರು ಕಾಂಗ್ರೆಸ್‌ ವಿರುದ್ಧ ಹರಿಹಾಯ್ದಿದ್ದಾರೆ.

ಈ ಕುರಿತು ಬುಧವಾರ ಟ್ವೀಟ್‌ ಮಾಡಿರುವ ಅವರು, ‘ಸರ್ಕಾರದ ನಿಯಮಗಳನ್ನು ಪಾಲಿಸಲಿಲ್ಲ. ಅಧಿಕಾರಿಗಳಿಗೆ ತಮ್ಮ ಕರ್ತವ್ಯ ಮಾಡಲು ಬಿಡಲಿಲ್ಲ. ಈಗ ಮಾನ್ಯ ಉಚ್ಛ ನ್ಯಾಯಾಲಯದ ಛೀಮಾರಿಗಾದರೂ ಕಾಂಗ್ರೆಸ್ ಪಕ್ಷ ತಲೆಬಾಗುವುದೇ?’ ಎಂದು ಪ್ರಶ್ನಿಸಿದ್ದಾರೆ.

‘ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಪ್ರತಿಪಕ್ಷದ ಪ್ರತಿಭಟನೆಗೆ ಅಡ್ಡಿ ಮಾಡಬಾರದು ಎಂಬುದು ಬಿಜೆಪಿ ಸರ್ಕಾರದ ಪ್ರಜಾಸತ್ತಾತ್ಮಕ ಹಾಗೂ ನೈತಿಕ ನಿಲುವೇ ಹೊರತು ದೌರ್ಬಲ್ಯವಲ್ಲ’ ಎಂದೂ ಸುಧಾಕರ್‌ ಟ್ವೀಟಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.