ADVERTISEMENT

ಕನಕಪುರದ ಡಿಕೆಶಿ ನಿವಾಸದಲ್ಲಿ ಮುಖಂಡರ ಸಭೆ ನಾಳೆ

​ಪ್ರಜಾವಾಣಿ ವಾರ್ತೆ
Published 7 ಜನವರಿ 2022, 16:09 IST
Last Updated 7 ಜನವರಿ 2022, 16:09 IST
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್   

ಬೆಂಗಳೂರು: ಮೇಕೆದಾಟುವಿನಿಂದ ಭಾನುವಾರ ಆರಂಭವಾಗುವ ಪಾದಯಾತ್ರೆಗೆ ಪೂರ್ವಭಾವಿಯಾಗಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಅವರ ಕನಕಪುರದ ಮನೆಯಲ್ಲಿ ಶನಿವಾರ ಸಂಜೆ ಕಾಂಗ್ರೆಸ್‌ ಶಾಸಕರು ಮತ್ತು ಹಿರಿಯ ಮುಖಂಡರ ಸಭೆ ನಡೆಯಲಿದೆ.

ಸಭೆಗೆ ಹಾಜರಾಗುವಂತೆ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ. ತುಕಾರಾಮ್‌ ಎಲ್ಲ ಶಾಸಕರಿಗೂ ಶುಕ್ರವಾರ ಪತ್ರ ಕಳುಹಿಸಿದ್ದಾರೆ. ಶನಿವಾರ ಮಧ್ಯಾಹ್ನ 3 ಗಂಟೆಯೊಳಗೆ ಕನಕಪುರ ತಲುಪಬೇಕು ಮತ್ತು ಎಲ್ಲ ಶಾಸಕರೂ ಲಗ್ಗೇಜಿನ ಸಮೇತ ಬರಬೇಕು ಎಂಬ ಸೂಚನೆ ಪತ್ರದಲ್ಲಿದೆ.

ಭಾನುವಾರ ಬೆಳಿಗ್ಗೆ 9 ಗಂಟೆಗೆ ಮೇಕೆದಾಟುವಿನಿಂದ ಬೆಂಗಳೂರಿಗೆ ಪಾದಯಾತ್ರೆ ಆರಂಭವಾಗಲಿದೆ. ಈ ಕುರಿತು ಶನಿವಾರ ಸಂಜೆ ಕನಕಪುರದಲ್ಲಿ ಸಮಾಲೋಚನೆ ನಡೆಯಲಿದೆ. ನಂತರ ಎಲ್ಲ ಶಾಸಕರು ಮತ್ತು ಮುಖಂಡರಿಗೆ ಅಲ್ಲಿಯೇ ವಾಸ್ತವ್ಯದ ವ್ಯವಸ್ಥೆ ಮಾಡಲಾಗಿದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.