ರಾಮನಗರ: ಪಾದಯಾತ್ರೆ ಮುಂದುವರಿಸದಂತೆ ಸೂಚಿಸಿ ರಾಮನಗರ ಪೊಲೀಸರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಮನೆಗೆ ನೋಟಿಸ್ ಅಂಟಿಸಿದ್ದಾರೆ.
ಅಧಿಕಾರಿಗಳ ತಂಡವು ಬುಧವಾರ ರಾತ್ರಿಯೇ ನೋಟಿಸ್ ಹಿಡಿದು ಕನಕಪುರದಲ್ಲಿ ಇರುವ ಡಿ.ಕೆ. ಶಿವಕುಮಾರ್ ನಿವಾಸಕ್ಕೆ ತೆರಳಿತು. ಈ ವೇಳೆ ಶಿವಕುಮಾರ್ ಹಾಗೂ ಸುರೇಶ್ ಇಬ್ಬರೂ ಮನೆಯಲ್ಲೇ ಇದ್ದರು. ಆದರೆ ಪೊಲೀಸರಿಂದ ನೋಟಿಸ್ ಸ್ವೀಕರಿಸಲಿಲ್ಲ. ಹೀಗಾಗಿ ಅವರ ಮನೆ ಬಾಗಿಲಿಗೆ ನೋಟಿಸ್ ಅಂಟಿಸಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.