ರಾಮನಗರ: ಹಿರಿಯ ಪೊಲೀಸ್ ಅಧಿಕಾರಿಗಳ ತಂಡವು ಇಲ್ಲಿನ ಕಾಂಗ್ರೆಸ್ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಪಾದಯಾತ್ರೆ ಕೈಬಿಡುವಂತೆ ತಿಳಿಸಿದರು. ಆದರೆ ಸಿದ್ದರಾಮಯ್ಯ ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಲಿಲ್ಲ. ಹೀಗಾಗಿ ಪೊಲೀಸರು ಅಲ್ಲಿಂದ ವಾಪಸ್ ತೆರಳಿದರು.
ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸಭೆಗೆ ಆಗಮಿಸಿದ್ದು, ಕಾಂಗ್ರೆಸ್ ನಾಯಕರ ಸಭೆ ಆರಂಭ ಆಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.