ADVERTISEMENT

ಪಾದಯಾತ್ರೆ ಇನ್ನು ಒಂದು ಹೆಜ್ಜೆ ಮುಂದೆ ಹೋಗಲು ಬಿಡುವುದಿಲ್ಲ: ಆರಗ ಜ್ಞಾನೇಂದ್ರ

​ಪ್ರಜಾವಾಣಿ ವಾರ್ತೆ
Published 13 ಜನವರಿ 2022, 5:35 IST
Last Updated 13 ಜನವರಿ 2022, 5:35 IST
ಆರಗ ಜ್ಞಾನೇಂದ್ರ
ಆರಗ ಜ್ಞಾನೇಂದ್ರ   

ಬೆಂಗಳೂರು: 'ಪಾದಯಾತ್ರೆ ತಡೆಯಲು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲಾಗುವುದು. ಪಾದಯಾತ್ರೆ ಇನ್ನು ಒಂದು ಹೆಜ್ಜೆ ಕೂಡಾ ಮುಂದೆ ಹೋಗಲು ಬಿಡುವುದಿಲ್ಲ' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ಸುದ್ದಿಗಾರರ ಜೊತೆ ಗುರುವಾರ ಮಾತನಾಡಿದ ಅವರು, 'ಪಾದಯಾತ್ರ ತಡೆಯಲು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುವುದು' ಎಂದರು‌

'ಮೇಕೆದಾಟು ಯೋಜನೆಯ ಬಗ್ಗೆ ಕಾಂಗ್ರೆಸ್ ಗೆ ಯಾವುದೇ ಬದ್ಧತೆ ಇಲ್ಲ. ಪಾದಯಾತ್ರೆಯಲ್ಲಿ ಭಾಗವಹಿಸಿದ ಹಲವರಿಗೆ ಕೋವಿಡ್ ದೃಢಪಟ್ಟಿದೆ. ರಾಜಕೀಯ ಲಾಭಕ್ಕಾಗಿ ಪಾದಯಾತ್ರೆ ನಡೆಸಲಾಗುತ್ತಿದೆ' ಎಂದರು.

ADVERTISEMENT

'ಹೈಕೋರ್ಟ್ ಆದೇಶ ಹಾಗೂ‌ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಪಾದಯಾತ್ರೆಯನ್ನು ಕಾಂಗ್ರೆಸ್ ಸ್ನಿಲ್ಲಿಸಲಿ. ಜನ ಆತಂಕಗೊಂಡಿದ್ದಾರೆ ಎಂದೂ ಮನವಿ‌ ಮಾಡಿದರು.

ಇವನ್ನೂ ಓದಿ:


ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.