ADVERTISEMENT

ಮೇಕೆದಾಟು ಯೋಜನೆ ತಕ್ಷಣ ಆರಂಭಿಸಿ: ಡಿ.ಕೆ. ಶಿವಕುಮಾರ್

​ಪ್ರಜಾವಾಣಿ ವಾರ್ತೆ
Published 31 ಜುಲೈ 2021, 19:32 IST
Last Updated 31 ಜುಲೈ 2021, 19:32 IST
ಶಿವಕುಮಾರ್
ಶಿವಕುಮಾರ್   

ಬೆಂಗಳೂರು: ‘ರಾಜ್ಯದ ಪಾಲಿನ ನೀರು ಬಳಸಿಕೊಳ್ಳುವ ಮೇಕೆದಾಟು ಯೋಜನೆ ಅನುಷ್ಠಾನ ಮಾಡಬಾರದು ಎಂದು ಯಾವ ಆದೇಶವೂ ಇಲ್ಲ. ಹೀಗಾಗಿ ಈ ಯೋಜನೆಯನ್ನು ಸರ್ಕಾರ ತಕ್ಷಣ ಆರಂಭಿಸಬೇಕು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆಗ್ರಹಿಸಿದರು.

ಸುದ್ದಿಗಾರರ ಜೊತೆ ಶನಿವಾರ ಮಾತನಾಡಿದ ಅವರು, ‘ವಿದ್ಯುತ್ ಉತ್ಪಾದನೆ ಹಾಗೂ ಬೆಂಗಳೂರಿಗೆ ಕುಡಿಯುವ ನೀರು ಪೂರೈಸುವ ಯೋಜನೆ ಇದಾಗಿದೆ. ಈ ಯೋಜನೆಯಿಂದ ಒಂದು ಎಕರೆಯೂ ನೀರಾವರಿ ಆಗುವುದಿಲ್ಲ. ತಮಿಳುನಾಡಿನ ಬಿಜೆಪಿ, ಡಿಎಂಕೆ ಅಥವಾ ಬೇರೆ ಪಕ್ಷಗಳು ಏನಾದರೂ ಮಾಡಿಕೊಳ್ಳಲಿ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಹಿಂದೆ ನೀರಾವರಿ ಸಚಿವರಾಗಿದ್ದವರು. ಅವರಿಗೆ ಈ ಯೋಜನೆಯ ಅರಿವಿದೆ’ ಎಂದರು.

‘ಯೋಜನೆಗೆ ಪರಿಸರ ಇಲಾಖೆ ಅನುಮತಿ ಸಿಕ್ಕಿದೆ. ಹೀಗಾಗಿ, ಕೇಂದ್ರ ಸರ್ಕಾರದ ಮೇಲೆ ಒತ್ತಡ ತಂದು, ಇತರ ಇಲಾಖೆಗಳ ಅನುಮತಿ ಪಡೆದು, ಆದಷ್ಟು ಬೇಗ ಗುದ್ದಲಿ ಪೂಜೆ ಮಾಡಿ, ಕೆಲಸ ಆರಂಭಿಸಲಿ. ಬೇರೆಯವರ ಮೇಲೆ ದೂರುತ್ತಾ ಕೂರುವುದಲ್ಲ. ಕೆಲಸ ಆರಂಭಿಸಬೇಡಿ ಎಂದು ಯಾವುದಾದರೂ ಆದೇಶ ಇದೆಯೇ’ ಎಂದು ಪ್ರಶ್ನಿಸಿದ ಶಿವಕುಮಾರ್‌, ‘ನೀವು ಕೆಲಸ ಆರಂಭಿಸಿ. ನಿಮಗೆ ಬೇಕಾದ ಎಲ್ಲ ರೀತಿಯ ಸಹಕಾರ ನಾವು ನೀಡುತ್ತೇವೆ. ಸರ್ಕಾರ ಯಾಕೆ ಇಚ್ಛಾಶಕ್ತಿ ತೋರುತ್ತಿಲ್ಲ ಎನ್ನುವುದು ಗೊತ್ತಿಲ್ಲ’ ಎಂದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.